ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ 85 ಸಕ್ರಿಯ ಸದಸ್ಯರಿಗೆ ಅಕ್ಕಿ ವಿತರಣೆ

ಬೆಳ್ತಂಗಡಿ: ಕೊರೊನಾ ವೈರಸ್ ಹರಡದಂತೆ ತಡೆಯಲು ಲಾಕ್‍ಡೌನ್ ಘೋಷಿಸಿದ್ದರಿಂದ ತೊಂದರೆಗೊಳಗಾದ ಕುಟುಂಬಗಳಿಗೆ ಬೆಳ್ತಂಗಡಿಯ ಹುಣ್ಸೆಕಟ್ಟೆ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವತಿಯಿಂದ 2019ರ ಎ.1 ರಿಂದ 2020ರ ಮೇ 5ರವರೆಗೆ ಹಾಲು ಹಾಕಿದ 85 ಸಕ್ರಿಯ ಸದಸ್ಯರಿಗೆ ತಲಾ 10 ಕೆ.ಜಿ. ಅಕ್ಕಿಯನ್ನು ಸಂಘದಲ್ಲಿ ವಿತರಿಸಲಾಯಿತು. 

ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಮೂವರು ನೌಕರರಿಗೆ ಪ್ರೋತ್ಸಾಹಕ ಕಿಟ್ ನೀಡಲಾಯಿತು. ಇಬ್ಬರು ಬಡ ಮಕ್ಕಳಿಗೆ ಪ್ರೋತ್ಸಾಹ ಧನವನ್ನು ವಿತರಿಸಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.