ದೇಶವನ್ನುದ್ದೇಶಿಸಿ ಇಂದು ರಾತ್ರಿ 8 ಗಂಟೆಗೆ ಪ್ರಧಾನಿ ಮೋದಿ ಭಾಷಣ

ಬೆಳ್ತಂಗಡಿ: ದೇಶದಲ್ಲಿ ಕೊರೊನಾ ವೈರಸ್‍ನ ಅಟ್ಟಹಾಸ ತಡೆಯಲು ಲಾಕ್‍ಡೌನ್ 3.0 ವಿಧಿಸಿರುವ ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ(ಮೇ 12) ರಾತ್ರಿ 8 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನ ಮಂತ್ರಿ ಕಾರ್ಯಾಲಯ (ಪಿಎಂಒ) ಟ್ವೀಟ್ ಮಾಡಿದೆ.

ಕೋವಿಡ್ -19 ವೈರಸ್ ಹರಡುವುದನ್ನು ತಡೆಯಲು ಈ ಮೊದಲು ಎರಡು ಹಂತದಲ್ಲಿ 40ದಿನಗಳ ಕಾಲ ದೇಶಾದ್ಯಂತ ಲಾಕ್‍ಡೌನ್ ಘೋಷಿಸಿದ್ದ ಪ್ರಧಾನಿ ಮೋದಿ ಆ ನಂತರ ಮೇ 4ರಿಂದ ಆರ್ಥಿಕ ಚಟುವಟಿಕೆಗಳಿಗೆ ಅವಕಾಶ ಮಾಡಲು ದೇಶದ ಜಿಲ್ಲೆಗಳನ್ನು ಕೆಂಪು, ಕಿತ್ತಳೆ, ಹಸಿರು ವಲಯಗಳಾಗಿ ವಿಂಗಡಿಸಿ ಮತ್ತೆ ಎರಡು ವಾರಗಳ ಕಾಲ ಮಾರ್ಗಸೂಚಿ ಅನ್ವಯ ಕೇಂದ್ರ ಸರ್ಕಾರವು ಲಾಕ್‍ಡೌನ್ ವಿಧಿಸಿತ್ತು.

ಮೇ 11ರ ಸೋಮವಾರ ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ನಿರಂತರ ಸಭೆ ನಡೆಸಿ ಆಯಾ ರಾಜ್ಯಗಳ ಅಭಿಪ್ರಾಯಗಳನ್ನು ಸಂಗ್ರಹಿಸಿರುವ ಪ್ರಧಾನಿ ಮೋದಿ ಅವರು ದೇಶದಲ್ಲಿ ಲಾಕ್‍ಡೌನ್ ಮುಂದುವರಿಸಬೇಕಾ ಅಥವಾ ಲಾಕ್‍ಡೌನ್ ಸಡಿಲಿಕೆ ಮಾಡಿ ಆರ್ಥಿಕ ಚಟುವಟಿಕೆಗೆ ಅವಕಾಶ ಮಾಡಬೇಕೋ ಎನ್ನುವ ಬಗ್ಗೆ ಮಾತನಾಡುವ ಸಾಧ್ಯತೆ ಇದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.