HomePage_Banner_
HomePage_Banner_

ಕೇಂದ್ರ ಸರ್ಕಾರದಿಂದ ಆದಾಯ ತೆರಿಗೆದಾರರಿಗೆ, ಸಣ್ಣಕೈಗಾರಿಕೆಗಳಿಗೆ ಬಂಪರ್ ಕೊಡುಗೆ

  • ಪ್ರಧಾನಿ ಮೋದಿ ಆರ್ಥಿಕ ಪ್ಯಾಕೇಜ್ ವಿವರ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಲಾಕ್‍ಡೌನ್‍ನಿಂದಾಗಿ ಆರ್ಥಿಕ ಸಂಕಷ್ಟ ಎದುರಾಗಿತ್ತು. ಅದರ ನಿವಾರಣೆಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ರಾತ್ರಿ 20 ಲಕ್ಷ ಕೋಟಿ ರೂಪಾಯಿಯ ಆರ್ಥಿಕ ಪ್ಯಾಕೇಜ್ ಘೋಷಣೆಯು ಯಾವ ವಲಯಗಳಿಗೆ ಎಷ್ಟು ಹಂಚಿಕೆಯಾಗಿದೆ ಎಂಬ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿವರಿಸಿದ್ದಾರೆ. 

ಬುಧವಾರ ಸಂಜೆ 4ಗಂಟೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಮುಂದಿನ ಕೆಲದಿನಗಳವರೆಗೆ ಹಂತ ಹಂತವಾಗಿ ಯೋಜನೆಗಳನ್ನು ಘೋಷಿಸಲಿದ್ದು, ಒಂದೊಂದು ವಲಯಕ್ಕೆ ಒಂದೊಂದು ದಿನ ಯೋಜನೆಗಳನ್ನು ಘೋಷಿಸಲಿದ್ದೇವೆ. ಇದುವರೆಗೆ 52 ಸಾವಿರ ಕೋಟಿ ರೂಪಾಯಿಯನ್ನು ಜನಧನ ಖಾತೆಗಳಿಗೆ ವರ್ಗಾಯಿಸಿದ್ದು, ಈವರೆಗೆ 42 ಕೋಟಿ ಜನರು ಫಲಾನುಭವಿಗಳಾಗಿದ್ದಾರೆ. ಎಂದು ಹೇಳಿದರು.

ಆದಾಯ ತೆರಿಗೆದಾರರಿಗೆ ಕೇಂದ್ರದಿಂದ ಬಂಪರ್ ಗಿಫ್ಟ್:
ಆದಾಯ ತೆರಿಗೆದಾರರಿಗೆ ಕೇಂದ್ರ ಸರ್ಕಾರ ಬಂಪರ್ ಗಿಫ್ಟ್ ನೀಡಿದೆ. 18 ಸಾವಿರ ಕೋಟಿ ರೂಪಾಯಿ ಆದಾಯ ತೆರಿಗೆಯನ್ನು ಆದಾಯ ತೆರಿಗೆ ಇಲಾಖೆ ವಾಪಸ್ ನೀಡಿದೆ. ಇದರಿಂದ 14 ಕೋಟಿ ಆದಾಯ ತೆರಿಗೆ ಪಾವತಿದಾರರಿಗೆ ಅನುಕೂಲವಾದಂತಾಗಿದೆ.

ನಾಳೆಯಿಂದ 2021ರ ಮಾರ್ಚ್‍ವರೆಗೆ ಟಿಡಿಎಸ್/ಟಿಸಿಎಸ್ ನಲ್ಲಿ ಶೇ.25 ರಷ್ಟು ಕಡಿತ ಮಾಡಿರುವ ಕೇಂದ್ರ ಸರ್ಕಾರವು ಇದರಿಂದ ಜನರಿಗೆ 50 ಸಾವಿರ ಕೋಟಿ ಉಳಿತಾಯವಾಗಲಿದೆ. ಲೆಕ್ಕಪರಿಶೋಧನೆ ಅವಧಿ ಅಕ್ಟೋಬರ್ 31ರವರೆಗೆ ವಿಸ್ತರಣೆಯಾಗಿದೆ. ತೆರಿಗೆ ಮೌಲ್ಯಮಾಪನ ಅವಧಿಯನ್ನು ಕೂಡ ಡಿಸೆಂಬರ್ 31ರವರೆಗೆ ವಿಸ್ತರಣೆ ಮಾಡಿದೆ.

ಎಂಎಸ್‍ಎಂಇಗಳಿಗೆ ಬಲ ನೀಡಿದ ಕೇಂದ್ರ ಸರಕಾರ:
ಸಣ್ಣ ಕೈಗಾರಿಕೆಗಳಿಗೆ 3ಲಕ್ಷ ಕೋಟಿ ರೂಪಾಯಿ ಸಾಲ ನೀಡಲಾಗಿದೆ. ಇದರಿಂದ 45 ಲಕ್ಷ ಕೈಗಾರಿಕೆಗಳಿಗೆ ಅನುಕೂಲವಾಗಲಿದೆ. ಅತಿಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಅಡಮಾನವಿಲ್ಲದೆ ಸಾಲ ನೀಡಲು ಕೇಂದ್ರ ಸರಕಾರ ನಿರ್ಧರಿಸಿದೆ. 25 ರಿಂದ 100 ಕೋಟಿ ರೂಪಾಯಿ ವಹಿವಾಟು ಹೊಂದಿರುವ ಕೈಗಾರಿಕೆಗಳಿಗೆ ಅನುಕೂಲವಾಗಲಿದೆ.

ಸಾಲ ಮರುಪಾವತಿಗೆ ನಾಲ್ಕು ವರ್ಷಗಳವರೆಗೆ ಕಾಲಾವಕಾಶ ನೀಡಲಾಗಿದೆ. ಸಾಲ ನೀಡಿದ ಮೊದಲ 12 ತಿಂಗಳವರೆಗೆ ಸಾಲ ಮರುಪಾವತಿಸುವ ಅಗತ್ಯವಿಲ್ಲ. ಬ್ಯಾಂಕುಗಳು ನೀಡುವ ಸಾಲಕ್ಕೆ ಕೇಂದ್ರ ಸರ್ಕಾರವೇ ಗ್ಯಾರಂಟಿ ನೀಡಲಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ವಿದ್ಯುತ್ ಕಂಪನಿಗಳಿಗೆ ಸಹಾಯ:
ಕೊರೊನಾದಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ವಿದ್ಯುತ್ ಸರಬರಾಜು ಕಂಪನಿಗಳ ಸಹಾಯಕ್ಕಾಗಿ 90 ಸಾವಿರ ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.