ಭೂಗತ ಲೋಕದ ಮಾಜಿ ದೊರೆ ಮುತ್ತಪ್ಪ ರೈ ಇನ್ನಿಲ್ಲ

ಬೆಳ್ತಂಗಡಿ: ಭೂಗತ ಲೋಕದ ಮಾಜಿ ದೊರೆ, ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಎನ್. ಮುತ್ತಪ್ಪ ರೈ ಅಲ್ಪಕಾಲದ  ಅಸೌಖ್ಯದಿಂದಾಗಿ ಮೇ.15ರಂದು ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇವರು ಮಾರಕ ಕ್ಯಾನ್ಸರ್  ಕಾಯಿಲೆಯಿಂದ ಬಳಲುತ್ತಿದ್ದರು. ಮೇ. 13ರಂದು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನಲೆಯಲ್ಲಿ ಮೇ.15ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಭೂಗತ ಲೋಕಕ್ಕೆ ವಿದಾಯ ಹೇಳಿದ್ದ ಅವರು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ಜಯ ಕರ್ನಾಟಕ ಸಂಘಟನೆಯನ್ನು ಸ್ಥಾಪಿಸಿ ಕಾರ್ಯಪ್ರವೃತ್ತರಾಗಿದ್ದರು. ಮೂಲತಃ  ಪುತ್ತೂರಿನ ಕೆಯ್ಯೂರು ನಿವಾಸಿಯಾಗಿರುವ ಮುತ್ತಪ್ಪ ರೈ ಪ್ರಸ್ತುತ ಬೆಂಗಳೂರಿನ ಬಿಡದಿಯಲ್ಲಿ ವಾಸವಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.