ಕರಾವಳಿಯಲ್ಲಿ ಮುಂದಿನ ಮೂರು ದಿನ ಮಳೆ ಸಾಧ್ಯತೆ  ಹವಾಮಾನ ಇಲಾಖೆಯಿಂದ ಯಲ್ಲೋ ಅಲರ್ಟ್ ಘೋಷಣೆ

ಬೆಳ್ತಂಗಡಿ: ಕರಾವಳಿ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಉತ್ತಮ ಮಳೆಯಾಗುವ ನಿರೀಕ್ಷೆಯನ್ನು ಹೊಂದಲಾಗಿದ್ದು, ಭಾರತೀಯ ಹವಾಮಾನ ಇಲಾಖೆಯು ‘ಯಲ್ಲೋ ಅಲರ್ಟ್’ ಘೋಷಿಸಿದೆ. 

ಬಂಗಾಲ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ಮುಂದಿನ ಮೂರು ದಿನಗಳ ಕಾಲ ಕರಾವಳಿ ಭಾಗದಲ್ಲಿ 64.5 ಮೀ.ಮೀ.ನಿಂದ 115.5 ಮೀ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದ್ದು, ಮಿಂಚು, ಗುಡುಗಿನೊಂದಿಗೆ ಗಾಳಿಯು ಹೆಚ್ಚಿರಲಿದೆ.

ಐದು ದಿನ ಮಳೆ ಸಾಧ್ಯತೆ:
ಹವಾಮಾನ ಇಲಾಖೆಯ ವರದಿಯ ಅನ್ವಯ ಕರಾವಳಿಯಲ್ಲಿ ಮೇ 15ರಿಂದ 19ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಮುಂಗಾರು ಮಳೆ ಬೇಗ ಬರುವುದೇ?
ನೈಋತ್ಯ ಬಂಗಾಲ ಕೊಲ್ಲಿಯಲ್ಲಿ ನಿಮ್ನ ಒತ್ತಡದ ಪರಿಣಾಮ ವಾಯುಭಾರ ಕುಸಿತ ಉಂಟಾಗಿದ್ದು, ಒಂದೆರಡು ದಿನಗಳಲ್ಲಿ ತೀವ್ರವಾಗುವ ಸಾಧ್ಯತೆ ಇದೆ. ಮುಂಬರುವ ಮುಂಗಾರು ಮಳೆಯ ಮೇಲೆ ಇದು ಪರಿಣಾಮ ಬೀರಲಿದೆ. ಸಾಮಾನ್ಯವಾಗಿ ಮೇ ಅಂತ್ಯ ಅಥವಾ ಜೂನ್ ಮೊದಲ ವಾರದಲ್ಲಿ ಮುಂಗಾರು ಕೇರಳಕ್ಕೆ ಪ್ರವೇಶಿಸುತ್ತದೆ. ಬಳಿಕ 3-4 ದಿನಗಳ ನಂತರ ರಾಜ್ಯ ಕರಾವಳಿ ಭಾಗಕ್ಕೆ ಮುಂಗಾರು ಆಗಮಿಸುತ್ತದೆ. ಆದರೆ ಈ ಬಾರಿ ವಾಯುಭಾರ ಕುಸಿತದ ಪರಿಣಾಮ ಅವಧಿಗಿಂತ ಒಂದು ವಾರ ಮುನ್ನವೇ ರಾಜ್ಯಕ್ಕೆ ಮುಂಗಾರು ಅಪ್ಪಳಿಸುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.