ಕರ್ನಾಟದಲ್ಲಿ ಇನ್ನೆರಡು ದಿನ ಲಾಕ್‌ಡೌನ್ ವಿಸ್ತರಣೆ – ರಾಜ್ಯ ಸರ್ಕಾರ ಆದೇಶ

ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಮಾಡಲಾಗಿರುವ ಲಾಕ್‌ಡೌನ್‌ ಇನ್ನೂ ಎರಡು ದಿನಗಳ ಕಾಲ ವಿಸ್ತರಣೆಗೆ ಕರ್ನಾಟಕ ರಾಜ್ಯ ಸರ್ಕಾರ ಆದೇಶಿಸಿದೆ.

ಈ ಬಗ್ಗೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ ಕೊರೊನಾ ನಿಯಂತ್ರಣಕ್ಕಾಗಿ ಪ್ರಸ್ತುತ ಜಾರಿಯಲ್ಲಿರುವ ಲಾಕ್‌ಡೌನ್‌ ಆದೇಶದ ಹೊಸ ಮಾರ್ಗಸೂಚಿಗಳು ಮುಂದಿನ ಆದೇಶದವರೆಗೆ ಅಥವಾ ಮೇ 19 ರವರೆಗೆ ಮುಂದುವರೆಸಲಾಗುತ್ತದೆ ಎಂದು ತಿಳಿಸಿದೆ.

ಕೊರೊನಾ ನಿಯಂತ್ರಣಕ್ಕಾಗಿ ಜಾರಿಯಲ್ಲಿರುವ ಲಾಕ್‌ಡೌನ್‌ ಇಂದು ಕೊನೆಯಾಗಲಿದ್ದು ಈಗಾಗಲೇ ಮಹಾರಾಷ್ಟ್ರ ಹಾಗೂ ತಮಿಳುನಾಡು ಸರ್ಕಾರ ಮೇ 31 ರವರೆಗೂ ಲಾಕ್‌ಡೌನ್‌ ವಿಸ್ತರಣೆ ಮಾಡಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.