ಜೂ.18ಕ್ಕೆ ಪಿಯುಸಿ ಇಂಗ್ಲೀಷ್, ಜೂ.25ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ

Advt_NewsUnder_1
Advt_NewsUnder_1

ಬೆಂಗಳೂರು; ಕೊರೊನಾ ಕಾರಣದಿಂದ ಮುಂದೂಡಲಾಗಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ 4 ರವರೆಗೆ ಹಾಗೂ ಬಾಕಿ ಉಳಿದಿದ್ದ ಪಿಯುಸಿಯ ಇಂಗ್ಲೀಷ್ ಪರೀಕ್ಷೆ ಜೂನ್ 18ರಂದು ನಡೆಸಲು ಸರಕಾರ ತೀರ್ಮಾನಿಸಿದೆ.

ಈ ಬಗ್ಗೆ ಪತ್ರಿಕಾಗೋಷ್ಟಿ ನಡೆಸಿದ ಸಚಿವ ಸುರೇಶ್ ಕುಮಾರ್, ಕೊರೊನಾ ಕಾರಣದಿಂದ ಹಲವು ಮುನ್ನೆಚ್ಚರಿಕೆ ವಹಿಸಲಾಗುತ್ತದೆ, ರಾಜ್ಯದಲ್ಲಿ 2879 ಪರೀಕ್ಷಾ ಕೇಂದ್ರಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದ್ದು ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ದಾಯ ಎಂದಿದ್ದಾರೆ.

SSLC ಪರೀಕ್ಷೆ ಮಾರ್ಚ್ 27 ರಿಂದ ಏಪ್ರಿಲ್ 9ರ ತನಕ ನಡೆಯಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಮುಂದೂಡಲಾಗಿತ್ತು. ಇದೀಗ ಜೂನ್ 25ರಿಂದ ಜುಲೈ 4 ರವರೆಗೆ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ. ಎಲ್ಲಾ ಸೆಂಟರ್ ರಲ್ಲಿ ಥರ್ಮಲ್ ಸ್ಕ್ಯಾನರ್ ವ್ಯವಸ್ಥೆ ಮಾಡಲಾಗುತ್ತದೆ. ಎಲ್ಲಾ ವಿದ್ಯಾರ್ಥಿಗಳು ಸ್ಯಾನಿಟೈಸರ್ ಬಳಸಬೇಕು, ಇದಕ್ಕಾಗಿ ರಾಜ್ಯ ಸ್ಕೌಟ್ ಮತ್ತು ಗೈಡ್ಸ್ ನ ಸಹಾಯ ದೊರೆಯಲಿದೆ . ಅಲ್ಲದೆ ಆರೋಗ್ಯ ಇಲಾಖೆ ಸಿಬ್ಬಂದಿಗಳು ವಿದ್ಯಾರ್ಥಿಗಳ ತಪಾಸಣೆ ಮಾಡ್ತಾರೆ. ಪರೀಕ್ಷೆ ಆರಂಭಕ್ಕೂ ಮೊದಲು ಎಲ್ಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡುತ್ತೇವೆ ಎಂದಿದ್ದಾರೆ.

ಮೊರಾರ್ಜಿ ದೇಸಾಯಿ ಶಾಲೆ, ಎಸ್ ಸಿ, ಎಸ್ ಟಿ ಹಾಸ್ಟಲ್ ಗಳನ್ನು ಕ್ವಾರಂಟೈನ್ ಮಾಡಿರುವ ಕಾರಣ ಅಲ್ಲಿನ ವಿದ್ಯಾರ್ಥಿಗಳು ಹತ್ತಿರದ ಶಾಲೆಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗುವುದು. ವಲಸೆ ಕಾರ್ಮಿಕರ ಮಕ್ಕಳಿಗೆ ಕೂಡಾ ಇದೇ ರೀತಿ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.