ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಕೊರೊನಾ ಮತ್ತಷ್ಟು ಆತಂಕ ಸೃಷ್ಟಿಸಿದ್ದು, ಸೋಮವಾರ ದ.ಕ ಇಬ್ಬರಿಗೆ ಹಾಗೂ ಉಡುಪಿಯಲ್ಲಿ ಒಬ್ಬ ಗರ್ಭಿಣಿ ಮಹಿಳೆ ಗೆ ಕೊರೊನಾ ದೃಢಪಟ್ಟಿದೆ.
ಮಹಾರಾಷ್ಟ್ರದ ರಾಯಗಡದಿಂದ ಆಗಮಿಸಿ ಕ್ವಾರೆಂಟೈನ್ ನಲ್ಲಿದ್ದ 30 ವರ್ಷದ ವ್ಯಕ್ತಿ ಹಾಗೂ 55 ವರ್ಷದ ಮಹಿಳೆಗೆ SARI ಪ್ರಕರಣದಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಇನ್ನು ಮಹಾರಾಷ್ಟ್ರದ ಮುಂಬೈ ನಿಂದ ಆಗಮಿಸಿ ಕ್ವಾರಂಟೈನ್ ನಲ್ಲಿದ್ದ ಉಡುಪಿಯ ಕೊಲ್ಲೂರಿನ 28 ವರ್ಷದ ಮಹಿಳೆಗೂ ಕೊರೊನಾ ದೃಢವಾಗಿದೆ.