ಎಸ್​ಎಸ್​ಎಲ್​ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

Advt_NewsUnder_1
Advt_NewsUnder_1

ಕೊರೋನಾ ವೈರಸ್ ಕಾರಣದಿಂದಾಗಿ ಮುಂದೂಡಿಕೆ ಮಾಡಲಾಗಿದ್ದ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ಜೂ.25ರಿಂದ ನಡೆಸುವುದಾಗಿ ಶಿಕ್ಷಣ ಸಚಿವ ಸುರೇಶ್​ ಕುಮಾರ್ ಮೇ.18ರಂದು ತಿಳಿಸಿದ್ದರು. ಅದರಂತೆ ಮೇ.19ರಂದು ಎಸ್​ಎಸ್​ಎಲ್​ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟವಾಗಿದೆ. ಜೂನ್​ 25ರಿಂದ ಪರೀಕ್ಷೆ ಆರಂಭವಾಗಲಿದ್ದು, ಜುಲೈ 4ರವರೆಗೆ ನಡೆಯಲಿದೆ. ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಇಂದು ಎಸ್​ಎಸ್​ಎಲ್​ಸಿ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಪರೀಕ್ಷಾ ವೇಳಾಪಟ್ಟಿ ಈ ರೀತಿ ಇದೆ…

ಜೂನ್ 25 – ಗುರುವಾರ -ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ – ಬೆಳಗ್ಗೆ- (10.30ರಿಂದ ಮಧ್ಯಾಹ್ನ 1.30ರವರೆಗೆ)
ಜೂನ್ 26- ಶುಕ್ರವಾರ- ಕೋರ್ ಸಬ್ಜೆಕ್​- ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಆ್ಯಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಟು (ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45), ಇಂಜಿನಿಯರಿಂಗ್ ಗ್ರಾಫಿಕ್ಸ್ ಟು (ಮಧ್ಯಾಹ್ನ 2ರಿಂದ ಸಂಜೆ 5.15ರವರೆಗೆ), ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45), ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ – ಬೆಳಗ್ಗೆ 10.30ರಿಂದ 1.45
ಜೂನ್ 27- ಶನಿವಾರ – ಗಣಿತ, ಸಮಾಜಶಾಸ್ತ್ರ, – ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45
ಜೂನ್ 29- ಸೋಮವಾರ- ವಿಜ್ಞಾನ, ರಾಜ್ಯಶಾಸ್ತ್ರ(ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45) ಕರ್ನಾಟಕ ಹಿಂದೂಸ್ತಾನಿ ಸಂಗೀತ- (ಮಧ್ಯಾಹ್ನ 2ರಿಂದ ಸಂಜೆ 5.15)
ಜುಲೈ- 1 ಬುಧವಾರ- ಸಮಾಜ ವಿಜ್ಞಾನ – ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45
ಜುಲೈ 2 – ಗುರುವಾರ- ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ – ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45
ಜುಲೈ- 3 ಶುಕ್ರವಾರ ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್, ಆರೇಬಿಕ್, ಪರ್ಶಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು – ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30
ಜುಲೈ 4- ಜೆಟಿಎಸ್ (JTS) ಅಭ್ಯರ್ಥಿಗಳಿಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆ
ಕೊರೋನಾ ವೈರಸ್​ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿ ಅಭ್ಯರ್ಥಿಯನ್ನು ಥರ್ಮಲ್ ಸ್ಕ್ಯಾನಿಂಗ್​ಗೆ ಒಳಪಡಿಸುವುದು, ಕೈಗಳನ್ನು ಸ್ಯಾನಿಟೈಸರ್​ನಿಂದ ಶುದ್ಧಿಕರಿಸುವುದು ಹಾಗೂ ಪ್ರತಿ ವಿದ್ಯಾರ್ಥಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಪರೀಕ್ಷಾರ್ಥಿಗಳು ಈ ಹಿನ್ನೆಲೆಯಲ್ಲಿ ಬೆಳಗ್ಗೆ 9.30ಕ್ಕೆ ಅಂದರೆ ಪರೀಕ್ಷೆ ಆರಂಭಕ್ಕೂ ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗಬೇಕು ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಕಡ್ಡಾಯ ಮಾಡಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.