ಬೆಳ್ತಂಗಡಿ: ತಾಲೂಕು ಬಂಟರ ಯಾನೆ ನಾಡವರ ಸಂಘದ ನೂತನ ಅಧ್ಯಕ್ಷರಾಗಿ ತಾಲೂಕಿನ ಖ್ಯಾತ ಉದ್ಯಮಿ ಪುಷ್ಪರಾಜ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ.
ಗುರುವಾಯನಕೆರೆಯ ಬಂಟರ ಭವನದಲ್ಲಿ ಮೇ 23ರಂದು ಚಂದ್ರಮೋಹನ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪುಷ್ಪಾರಾಜ ಶೆಟ್ಟಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಪುಷ್ಪರಾಜ ಶೆಟ್ಟಿ ಅವರು ಹೊಟೇಲ್ ಉದ್ಯಮಿಯಾಗಿ, ಹಲವಾರು ಸಂಘ ಸಂಸ್ಥೆಗಳಲ್ಲಿ ವಿವಿಧ ಜವಾಬ್ದಾರಿ ಪಡೆಯುವುದರ ಜೊತೆಗೆ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಸಾಮಾಜಿಕ, ಕ್ರೀಡೆ ಹಾಗೂ ಎಲೆಕ್ಟ್ರಾನಿಕ್ಸ್ ಉದ್ಯಮಿಯಾಗಿಯೂ ಗುರುತಿಸಿಕೊಂಡಿದ್ದಾರೆ.