HomePage_Banner_
HomePage_Banner_
HomePage_Banner_

ದಕ್ಷಿಣ ಕನ್ನಡ ಜಿಲ್ಲೆಯ ಮೂವರಿಗೆ ಕೊರೊನಾ ಸೋಂಕು ದೃಢ

Advt_NewsUnder_1

ಕತಾರ್ ನಿಂದ ಆಗಮಿಸಿದ 3 ಮಂದಿಗೆ ಬೆಂಗಳೂರಿನಲ್ಲಿ ಚಿಕಿತ್ಸೆ

ಉಡುಪಿ ಜಿಲ್ಲೆಯಲ್ಲಿಯೂ ಮೂವರಿಗೆ ಕೋವಿಡ್ -19 ಸೋಂಕು

ಬೆಳ್ತಂಗಡಿ: ವಿದೇಶದಿಂದ ಆಗಮಿಸಿದ ದಕ್ಷಿಣ ಕನ್ನಡ ಜಿಲ್ಲೆಯ ಮೂವರಿಗೆ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ.

ಆರೋಗ್ಯ ಇಲಾಖೆಯ ಮಂಗಳವಾರದ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ವರದಿಯಲ್ಲಿ ಉಲ್ಲೇಖಿಸಿದಂತೆ ಕತಾರ್ ದೇಶದಿಂದ ಆಗಮಿಸಿದ 30, 37, 30 ವರ್ಷದ ಮೂವರು ಪುರುಷರಲ್ಲಿ ಕೋವಿಡ್ -19 ಸೋಂಕು ಇರುವುದು ಗಂಟಲು ದ್ರವ ಪರೀಕ್ಷೆಯ ವರದಿಯಿಂದ ದೃಢಪಟ್ಟಿದೆ. ಈ ಮೂವರಿಗೂ ಬೆಂಗಳೂರಿನ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದರಿಂದ ದ.ಕ. ಜಿಲ್ಲೆಯ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 64ಕ್ಕೆ ಏರಿಕೆಯಾಗಿದೆ.

ಉಡುಪಿ ಜಿಲ್ಲೆಯಲ್ಲಿ ಮೂವರಿಗೆ ಸೋಂಕು:
ಉಡುಪಿ ಜಿಲ್ಲೆಗೆ ‘ಮಹಾ’ರಾಷ್ಟ್ರ ಕಂಟಕ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆಯಲ್ಲಿ ಮಂಗಳವಾರವೂ ಮಹಾರಾಷ್ಟ್ರದಿಂದ ಬಂದ 9 ವರ್ಷದ ಬಾಲಕಿ ಸೇರಿದಂತೆ 27 ವರ್ಷದ ಪುರುಷ ಹಾಗೂ 30 ವರ್ಷದ ಮಹಿಳೆಗೆ ಕೊರೊನಾ ಸೋಂಕು ಬಾಧಿಸಿದೆ. ಈ ಮೂವರಿಗೂ ಉಡುಪಿಯ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ರಾಜ್ಯದಲ್ಲಿ ಮೇ 26ರ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ವರದಿಯಲ್ಲಿ 100 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2282ಕ್ಕೆ ಏರಿಕೆಯಾಗಿದೆ. ಇದರಲ್ಲಿ 722 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 44 ಮಂದಿ ಸೋಂಕಿನಿಂದ ಸಾವನ್ನಪ್ಪಿದರೆ, ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಮೃತಪಟ್ಟಿದ್ದಾರೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.