ಪ್ರತಿದಿನ ಮಧ್ಯಾಹ್ನ 2ರಿಂದ ಅಂಗಡಿಗಳ ಬಂದ್ ಮಾಡಲು ವೇಣೂರು ವರ್ತಕರ ನಿರ್ಧಾರ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ : ವೇಣೂರಿನ 43 ವರ್ಷದ ವ್ಯಕ್ತಿಯೊಬ್ಬರು ಕೊರೊನಾ ಸೋಂಕಿನಿಂದ ಮೃತಪಟ್ಟ ಹಿನ್ನೆಲೆಯಲ್ಲಿ ವೇಣೂರು ಪೇಟೆಯ ಎಲ್ಲ ಅಂಗಡಿ ಮುಂಗಟ್ಟುಗಳನ್ನು ಮುಂದಿನ ಶನಿವಾರದವರೆಗೆ ಪ್ರತಿದಿನ ಮಧ್ಯಾಹ್ನ 2 ಗಂಟೆಗೆ ಬಂದ್ ಮಾಡಲು ವೇಣೂರು ವರ್ತಕರ ಸಂಘವು ನಿರ್ಧರಿಸಿದೆ.

ಮೇ26 ರ ಬೆಳಗ್ಗೆ ವರ್ತಕರ ಸಂಘದ ಅಧ್ಯಕ್ಷ ಭಾಸ್ಕರ ಪೈ ಅವರು ಎಲ್ಲ ವರ್ತಕರ ಸಂಪರ್ಕಿಸಿ ಅಭಿಪ್ರಾಯ ಸಂಗ್ರಹಿಸಿ ಒಕ್ಕೊರಲಿನಿಂದ ಕೈಗೊಂಡ ತೀರ್ಮಾನದಂತೆ ಪ್ರತಿದಿನ ಮಧ್ಯಾಹ್ನ 2 ಗಂಟೆಗೆ ಅಂಗಡಿಗಳ ಬಂದ್ ಮಾಡಲು ನಿರ್ಧರಿಸಿರುವುದಕ್ಕೆ ಎಲ್ಲ ವರ್ತಕರು ಸಹಮತ ವ್ಯಕ್ತಪಡಿಸಿದ್ದು, ಈ ತೀರ್ಮಾನವು ಇಂದಿನಿಂದಲೇ ವೇಣೂರಿನಲ್ಲಿ ಜಾರಿಗೆ ಬಂದಿದೆ.
ಮುಂಜಾಗ್ರತಾ ಕ್ರಮವಾಗಿ ಎಲ್ಲ ವರ್ತಕರು ಸ್ವಯಂಪ್ರೇರಣೆಯಿಂದ ನಿರ್ಧಾರ ಕೈಗೊಂಡಿದ್ದಾರೆ ಎಂದು ವರ್ತಕರ ಸಂಘದ ಅಧ್ಯಕ್ಷ ಭಾಸ್ಕರ ಪೈ ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.