HomePage_Banner_
HomePage_Banner_

ಎಸ್ಸೆಸ್ಸೆಲ್ಸಿ ಪರೀಕ್ಷೆ: ಶಾಸಕ ಹರೀಶ್ ಪೂಂಜರ ನೇತೃತ್ವದಲ್ಲಿ ಚಿಂತನಾ ಮಂಥನಾ ಸಭೆ

ಬೆಳ್ತಂಗಡಿ: ಬರುವ ಜೂ.25ರಿಂದ ನಡೆಯಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ತಯಾರಿಸಿ ಪ್ರತಿ ವಿದ್ಯಾರ್ಥಿಗಳಿಗೆ ತಲುಪಿಸುವುದು, ದೂರದ ಪ್ರದೇಶಗಳಿಂದ ಪರೀಕ್ಷಾ ಕೇಂದ್ರಕ್ಕೆ ಬರಲು ಉಚಿತ ಬಸ್ಸಿನ ವ್ಯವಸ್ಥೆ, ಪರವೂರಿನಲ್ಲಿರುವ ವಿದ್ಯಾರ್ಥಿಗಳು ಇಚ್ಚಿಸಿದಲ್ಲಿ ಅವರ ಊರಿನ ಶಾಲೆಯಲ್ಲೇ ಪರೀಕ್ಷೆಗೆ ಅವಕಾಶ, ಪರೀಕ್ಷಾ ಕೇಂದ್ರಲ್ಲಿ ಸಿಸಿಟಿವಿ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಮಾಡುವ ಬಗ್ಗೆ ಮೇ 26ರಂದು ಬೆಳ್ತಂಗಡಿ ಶ್ರೀ ಮಂಜುನಾಥಸ್ವಾಮಿ ಕಲಾಭವನದಲ್ಲಿ ನಡೆದ ಚಿಂತನಾ-ಮಂಥನಾ ಸಭೆಯಲ್ಲಿ ನಿರ್ಧರಿಸಲಾಯಿತು.

ಜಿಲ್ಲೆಯಲ್ಲೇ ಪ್ರಥಮವಾಗಿ ಬೆಳ್ತಂಗಡಿ ತಾಲೂಕಿನಲ್ಲಿ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಪ್ರೌಢ ಶಾಲಾ ಶಿಕ್ಷಕರೊಂದಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪೂರ್ವ ತಯಾರಿ ಕುರಿತು ನಡೆದ ಈ ಸಭೆಯಲ್ಲಿ ಜಿಲ್ಲಾ ವಿದ್ಯಾಂಗ ಉಪನಿರ್ದೇಶಕ ಮಲ್ಲೇಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ, ಬೆಳ್ತಂಗಡಿ ಬಿ.ಆರ್.ಸಿ ಶಂಭುಶಂಕರ್, ಶಿಕ್ಷಣ ಸಂಯೋಜಕರುಗಳಾದ ರಮೇಶ್ ಕೆ, ಸುಭಾಶ್‍ಜಾದವ್, ತಾಲೂಕು ದೈಹಿಕ ಪರೀವೀಕ್ಷಾಣಾಧಿಕಾರಿ ಭುವನೇಶ್ ಜಿ, ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಲಕ್ಷ್ಮೀನಾರಾಯಣ ಉಪಸ್ಥಿತರಿದ್ದರು.

ಶಿಕ್ಷಕರಾದ ಯಶೋಧರ ಸುವರ್ಣ ಅಳದಂಗಡಿ, ಸದಾಶಿವ ಶೆಟ್ಟಿ ದೇವರಗುಡ್ಡೆ, ರಾಮಕೃಷ್ಣ ಭಟ್ ಬೆಳಾಲು, ರಾಧಕೃಷ್ಣ ಕೊಯ್ಯೂರು, ಪ್ರಶಾಂತ್ ಸವಣಾಲು, ಮುರಳೀಧರ್ ಮುಂಡಾಜೆ, ಪರಿಮಳ ಧರ್ಮಸ್ಥಳ ಮೊದಲಾದವರು ಅನಿಸಿಕೆ ವ್ಯಕ್ತಪಡಿಸಿ ಸಲಹೆ-ಸೂಚನೆಗಳನ್ನು ನೀಡಿದರು.
ಶಾಸಕ ಹರೀಶ್ ಪೂಂಜ ಮಾತನಾಡಿ, ಬೆಳ್ತಂಗಡಿ ತಾಲೂಕಿನಲ್ಲಿ ಈ ಬಾರಿ 4,119 ಮಂದಿ ಮಕ್ಕಳು ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 400ರಿಂದ 500 ಮಂದಿ ವಿದ್ಯಾರ್ಥಿಗಳು ಹೊರ ಜಿಲ್ಲೆಯವರಾಗಿದ್ದು, ಅವರು ತಾವು ಇರುವ ಊರಿನಲ್ಲೇ ಪರೀಕ್ಷೆ ಬರೆಯಲು ನೋಂದಾವಣೆ ಮಾಡಿಕೊಂಡಿದ್ದಾರೆ. ತಾಲೂಕಿನಲ್ಲಿ 13 ಪರೀಕ್ಷಾಕೇಂದ್ರಗಳಿದ್ದು, ಇವುಗಳಲ್ಲಿ ಯಾವುದಾದರೂ ಕ್ವಾರಂಟೈನ್ ಕೇಂದ್ರಗಳಿದಲ್ಲಿ ಸಾನಿಟೈಸರ್ ಮಾಡಿಸಿ ಕೊಡುತ್ತೇವೆ. ಅಲ್ಲದೆ ಎಲ್ಲಾ ವಿದ್ಯಾರ್ಥಿಗಳಿಗೆ ದಾನಿಗಳ ಮೂಲಕ ಮರುಬಳಕೆ ಮಾಡುವ ಮಾಸ್ಕ್ ವ್ಯವಸ್ಥೆ ಅಲ್ಲದೆ ಗ್ರಾಮೀಣ ಪ್ರದೇಶದಿಂದ ಬರುವವರಿಗೆ ಉಚಿತ ಬಸ್ಸಿನ ವ್ಯವಸ್ಥೆ ಮಾಡಿಸಿಕೊಡುವುದಾಗಿ ಭರವಸೆ ನೀಡಿದರು.

ಶಿಕ್ಷಕ ಧರಣೇಂದ್ರ ಕೆ. ಜೈನ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಣ ಸಂಯೋಜಕ ಸುಭಾಶ್‍ಜಾದವ್ ಸ್ವಾಗತಿಸಿ, ವಾಣಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಲಕ್ಷ್ಮೀನಾರಾಯಣ ವಂದಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.