HomePage_Banner_
HomePage_Banner_
HomePage_Banner_

ಕೇಂದ್ರ ಸರ್ಕಾರದ ಪ್ರಸ್ತಾವಿತ ವಿದ್ಯುತ್ ತಿದ್ದುಪಡಿ ಮಸೂದೆ ವಿರೋಧಿಸಿ ದ.ಕ. ಜಿಲ್ಲಾ ಕಿಸಾನ್ ಕಾಂಗ್ರೆಸ್‍ನಿಂದ ಜಿಲ್ಲಾಧಿಕಾರಿಗೆ ಮನವಿ

Advt_NewsUnder_1
  • ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್‍ಗೆ ಮನವಿ ಸಲ್ಲಿಕೆ

ಮಂಗಳೂರು: ಕೋವಿಡ್-19 ವೈರಸ್ ಬಿಕ್ಕಟ್ಟಿನ ನಡುವೆಯೂ ಕೇಂದ್ರ ಸರ್ಕಾರವು ಪ್ರಸ್ತಾವಿತ ಹೊಸ ವಿದ್ಯುತ್ ತಿದ್ದುಪಡಿ ಮಸೂದೆ-2020 ಅನ್ನು ತರಲು ಉದ್ದೇಶಿಸಿರುವುದಕ್ಕೆ ಕರ್ನಾಟಕ ಕಿಸಾನ್ ಕಾಂಗ್ರೆಸ್ ತೀವ್ರವಾಗಿ ವಿರೋಧಿಸಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಅವರು ದ.ಕ.ಜಿಲ್ಲಾಧಿಕಾರಿಗೆ ಸಲ್ಲಿಸಿದ ಮನವಿಯಲ್ಲಿ ತಿಳಿಸಿದ್ದಾರೆ.
ದ.ಕ. ಜಿಲ್ಲಾಧಿಕಾರಿ ಸಿಂಧೂ ರೂಪೇಶ್‍ಗೆ ಸಲ್ಲಿಸಿದ ಮನವಿಯಲ್ಲಿ ಪ್ರಸ್ತಾವಿತ ಮಸೂದೆಯಿಂದ ಕೇಂದ್ರವು ರೈತರಿಗೆ ಸಮಸ್ಯೆಗಳನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದೆ. ಪ್ರಧಾನಿ ಮೋದಿಯವರ ಆಪ್ತ ಉದ್ಯಮಿ ಗೌತಮ್ ಅದಾನಿ ಹಾಗೂ ಇತರರಿಗೆ ಲಾಭ ಮಾಡಿಸುವ ಹುನ್ನಾರವಿದೆ ಎಂದು ಕರ್ನಾಟಕ ಕಿಸಾನ್ ಕಾಂಗ್ರೆಸ್ ಅಭಿಪ್ರಾಯಪಟ್ಟಿದೆ. ಕೃಷಿ ಕ್ಷೇತ್ರಕ್ಕೆ ಈಗ ಉಚಿತ ವಿದ್ಯುತ್ ನೀಡಲಾಗುತ್ತಿದ್ದು ಇದಕ್ಕೆ ದರ ವಿಧಿಸುವಂತಹ ಗಂಭೀರ ವಿಚಾರದಲ್ಲಿ ಕೇಂದ್ರ ಸರ್ಕಾರ ರೈತರ ಜೊತೆ ಚೆಲ್ಲಾಟವಾಡುತ್ತಿದೆ.

ಈ ವಿಚಾರವಾಗಿ ಕೇಂದ್ರವು ಅಭಿಪ್ರಾಯ ತಿಳಿಸಲು ರಾಜ್ಯ ಸರ್ಕಾರಕ್ಕೆ ನೀಡಿದ 21 ದಿನಗಳ ಗಡುವು ಮುಗಿಯುತ್ತಲಿದೆ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಕೇಂದ್ರದ ತಿದ್ದುಪಡಿಗೆ ಒಪ್ಪಿಗೆ ಸೂಚಿಸಬಾರದು ಎನ್ನುವ ಮೂಲಕ ರಾಜ್ಯ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಲಾಗಿದೆ ಎಂದು ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಮನವಿಯಲ್ಲಿ ಹೇಳಿದ್ದಾರೆ.

ಈ ಸಂದರ್ಭದಲ್ಲಿ ಬಂಟ್ವಾಳ ವಲಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಯಾನಂದ ನೇರಂಬೋಲ್ ಸೇರಿದಂತೆ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.