HomePage_Banner_
HomePage_Banner_

ಬಳಂಜ: ಕ್ವಾರಂಟೈನ್‌ನಲ್ಲಿದ್ದ ಇಬ್ಬರಿಗೆ ಕೊರೊನಾ ಪಾಸಿಟಿವ್ ಶಂಕೆ

ಬಳಂಜ: ಬೆಳ್ತಂಗಡಿ ತಾಲೂಕಿನ ಬಳಂಜದಲ್ಲಿ ಮುಂಬಯಿಯಿಂದ ಬಂದು ಸರಕಾರಿ ಕ್ವಾರಂಟೈನ್‌ನಲ್ಲಿದ್ದ ಇಬ್ಬರಿಗೆ ಕೊರೊನಾ ಸೋಂಕು ಇರುವ ಶಂಕೆ ವ್ಯಕ್ತವಾಗಿದೆ.

4 ಮಂದಿಯ ಕುಟುಂಬವೊಂದು ಮೇ 19 ರಂದು ಮುಂಬಯಿಯಿಂದ ಆಗಮಿಸಿ ಕ್ವಾರಂಟೈನ್‌ಗೆ ಒಳಗಾಗಿದ್ದರು. ನಾಲ್ಕು ದಿನಗಳ ಹಿಂದೆ ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಇವರಲ್ಲಿ 38 ವರ್ಷದ ಮಹಿಳೆ ಮತ್ತು 11 ವರ್ಷದ ಬಾಲಕಿಗೆ ಕೊರೊನಾ ಇರುವ ಶಂಕೆ ವ್ಯಕ್ತವಾಗಿದೆ. ಇವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಕೋವಿಡ್ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.