HomePage_Banner_
HomePage_Banner_

ಬೆಳಾಲು ನವ ಜೀವನ ಸಮಿತಿ ಸದಸ್ಯರಿಗೆ ಆಹಾರ ಕಿಟ್ ವಿತರಣೆ

ಬೆಳಾಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬೆಳಾಲು ಗ್ರಾಮದ 13 ಮಂದಿ ನವ ಜೀವನ ಸಮಿತಿ ಸದಸ್ಯರಿಗೆ ಮೇ 30ರಂದು ಬೆಳಾಲು ಶ್ರೀ ಧ.ಮ.ಪ್ರೌಢಶಾಲೆಯಲ್ಲಿ ಆಹಾರ ಸಾಮಾಗ್ರಿಗಳನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್.ಹೆಚ್. ವಿತರಣೆ ಮಾಡಿದರು.

ಅವರು ಮಾತನಾಡುತ್ತಾ ಕೊರೊನಾ ವ್ಯೆರಸ್ ಸೋಂಕು ತಡೆಕಟ್ಟುವ ಬಗ್ಗೆ ಎಲ್ಲರೂ ಜಾಗ್ರತೆಯಿಂದ ಇರಬೇಕು ಎಂದರು.

ಜನ ಜಾಗೃತಿ ವೇದಿಕೆಯ ನಿರ್ದೇಶಕ ವಿವೇಕ್ ವಿ.ಪಾಯಿಸ್,ತಾಲೂಕು ಯೋಜನಾಧಿಕಾರಿ ಜಯಕರ ಶೆಟ್ಟಿ, ಜನ ಜಾಗೃತಿ ಯೋಜನಾಧಿಕಾರಿ ಚೆನ್ನಪ್ಪ ಗೌಡ, ತಾಲೂಕು ಜನ ಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ತಿಮ್ಮಪ್ಪ ಗೌಡ ಬನಂದೂರು,ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಮಕೃಷ್ಣ ಭಟ್,ಜನ ಜಾಗೃತಿ ವೇದಿಕೆಯ ತಾಲೂಕು ಸಮಿತಿ ಸದಸ್ಯ ಯೋಗೀಶ್ ಗೌಡ, ವಲಯ ಮೇಲ್ವಿಚಾರಕಿ ಅಶ್ವಿತಾ, ನವ ಜೀವನ ಸಮಿತಿ ಅಧ್ಯಕ್ಷ ಸೂರಪ್ಪ ಗೌಡ ಸದಸ್ಯರುಗಳು, ಒಕ್ಕೂಟದ ಅಧ್ಯಕ್ಷ ರತ್ನಾಕರ್ ಆಚಾರ್ಯ, ಸೇವಾ ಪ್ರತಿನಿಧಿ ಆಶಾ,  ಕೊಲ್ಪಾಡಿ ಒಕ್ಕೂಟ ಅಧ್ಯಕ್ಷ ಎಲ್ಯಣ್ಣ ನಾಯ್ಕ, ನವ ಜೀವನ ಸಮಿತಿ ಮಾಜಿ ಅಧ್ಯಕ್ಷ ಜನಾರ್ಧನ ಪೂಜಾರಿ ಮೊದಲಾದವರು ಹಾಜರಿದ್ದರು

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.