ಬೆಳ್ತಂಗಡಿ: ಕೊರೊನಾ ವೈರಸ್ ಹರಡದಂತೆ ತಡೆಯಲು ಲಾಕ್ಡೌನ್ ಹೇರಿದ್ದರಿಂದ ಆರ್ಥಿಕ ಸಂಕಷ್ಟದಿಂದ ಖಾಸಗಿ ಬಸ್ ನೌಕರರಿಗೆ ಹಾಗೂ ಸಿಬ್ಬಂದಿಗೆ ತೊಂದರೆಯಾಗಿದ್ದು, ಅವರಿಗೆ ಪರಿಹಾರ ಒದಗಿಸುವಂತೆ ಅಖಿಲ ಕರ್ನಾಟಕ ರಾಜಕೇಸರಿ ಸಂಘಟನೆ ವತಿಯಿಂದ ಮೀನುಗಾರಿಕೆ ಹಾಗೂ ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಿದರು.
ಈ ಮನವಿಯ ಜೊತೆಗೆ ಸರ್ಕಾರಿ ಶಾಲೆ ಉಳಿಸಿ ಬೆಳೆಸಿ, ಸರ್ಕಾರಿ ಶಾಲೆಯಲ್ಲಿ ದುಡಿಯುವ ಶಿಕ್ಷಕರ ಮಕ್ಕಳು ಕಡ್ಡಾಯವಾಗಿ ಸರ್ಕಾರಿ ಶಾಲೆಯಲ್ಲಿ ಕಲಿಯಬೇಕು. ಸರ್ಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಮಾತ್ರ ಸರ್ಕಾರಿ ಕೆಲಸ ಕಡ್ಡಾಯವಾಗಿ ಸಿಗವಂತೆ ಆಗಬೇಕು ಎಂಬ ಮನವಿಯನ್ನು ಈ ವೇಳೆ ಮಾಡಿದರು.
ಈ ಸಂದರ್ಭದಲ್ಲಿ ಸುವರ್ಣ ಪ್ರತಿಷ್ಠಾನದ ಅಧ್ಯಕ್ಷರಾದ ಸಂಪತ್ ಬಿ ಸುವರ್ಣ, ರಾಜ ಕೇಸರಿ ಸಂಸ್ಥಾಪಕ ದೀಪಕ್ ಜಿ ಹಾಗೂ ಸದಸ್ಯರಾದ ನವೀನ್ ಇಂದಬೆಟ್ಟು, ಪ್ರವೀಣ್ ಕುಲಾಲ್, ಗುರುಪ್ರಸಾದ್ ಕೋಟ್ಯಾನ್, ಪ್ರಕಾಶ್ ಕೋಟ್ಯಾನ್ ಉಪಸ್ಥಿತರಿದ್ದರು.