HomePage_Banner_
HomePage_Banner_
HomePage_Banner_

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ 14 ಮಂದಿಗೆ ತಗುಲಿದ ಕೊರೊನಾ ಸೋಂಕು * ಬೆಳ್ತಂಗಡಿ ತಾಲೂಕಿನ ಬಳಂಜದಲ್ಲಿ ಕ್ವಾರಂಟೈನ್ ನಲ್ಲಿದ್ದ ಇಬ್ಬರಿಗೆ ಸೋಂಕು ದೃಢ

Advt_NewsUnder_1

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಹಾಮಾರಿ ಕೋವಿಡ್-19 ಸೋಂಕು ಶನಿವಾರ ಬೆಳ್ತಂಗಡಿ ತಾಲೂಕಿನ ಇಬ್ಬರು ಸೇರಿ ಒಟ್ಟು 14 ಮಂದಿಗೆ ದೃಢಪಟ್ಟಿದೆ. ಇದರಲ್ಲಿ 13 ಮಂದಿ ಮಹಾರಾಷ್ಟ್ರ ರಾಜ್ಯದಿಂದ ವಾಪಾಸ್ ಬಂದವರಾಗಿದ್ದಾರೆ.

ರಾಜ್ಯ ಆರೋಗ್ಯ ಇಲಾಖೆಯ ಶನಿವಾರ ಸಂಜೆಯ ಬುಲೆಟಿನ್ ವರದಿಯಲ್ಲಿ ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದಲ್ಲಿ ಸರ್ಕಾರಿ ಕ್ವಾರಂಟೈನ್‍ನಲ್ಲಿದ್ದ 11 ವರ್ಷದ ಬಾಲಕಿ ಹಾಗೂ 38ವರ್ಷದ ಮಹಿಳೆಗೆ ಸೋಂಕು ತಗುಲಿರುವುದು ಅವರ ಗಂಟಲು ದ್ರವ ಮಾದರಿಯ ಪರೀಕ್ಷೆಯಲ್ಲಿ ದೃಢಪಟ್ಟಿದ್ದರೆ, 54, 24, 21, 38, 48, 61, 24, 31, 20, 26 ವರ್ಷದ ಪುರುಷರಿಗೆ ಹಾಗೂ 33 ವರ್ಷದ ಮಹಿಳೆಗೆ ಸೋಂಕು ತಗುಲಿದೆ. ಜಿಲ್ಲೆಯಲ್ಲಿ ಕೋವಿಡ್ ರೋಗಿ ಸಂಖ್ಯೆ 947ನೇ ಸಂಪರ್ಕ ವ್ಯಕ್ತಿಯಿಂದ 17 ವರ್ಷದ ಯುವಕನಿಗೆ ವೈರಸ್ ತಗುಲಿದೆ. ಇದರಿಂದ ದ.ಕ ಜಿಲ್ಲೆಯಲ್ಲಿ ಅಂತಾರಾಜ್ಯ ಪ್ರಯಾಣಿಕರಿಂದ ಸೋಂಕಿನ ವರದಿಗಳು ಹೆಚ್ಚಲು ಕಾರಣವಾಗಿದೆ.

ಉಡುಪಿ ಜಿಲ್ಲೆಯಲ್ಲಿ 13 ಮಂದಿಗೆ :
ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಿದ್ದು, ಶನಿವಾರ ಮತ್ತೆ 13 ಮಂದಿಗೆ ಹೊಸ ಸೋಂಕು ತಗುಲಿರುವುದು ದೃಢವಾಗಿದೆ.

ರಾಜ್ಯದಲ್ಲಿಂದು ಸಂಜೆಯ ಹೆಲ್ತ್ ಬುಲೆಟಿನ್ ವರದಿಯಲ್ಲಿ 141 ಹೊಸ ಸೋಂಕು ಪ್ರಕರಣಗಳು ದೃಢವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 2922ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿಗೆ ಬೀದರ್‍ನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಇದರಿಂದ ರಾಜ್ಯದಲ್ಲಿ ಕೊರೊನಾ ವೈರಸ್‍ಗೆ ಬಲಿಯಾದವರ ಸಂಖ್ಯೆ 49ಕ್ಕೆ ಏರಿದೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.