ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಗಳು ಮೇ.14ರಂದು ಮಹಾರಾಷ್ಟ್ರ ದಿಂದ ಆಗಮಿಸಿ ಮಾಲಾಡಿ ಗ್ರಾಮದ ಮಡಂತ್ಯಾರ್ ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಮೇ.14 ರಿಂದ ಕ್ವಾರಂಟೈನ್ ನಲ್ಲಿದ್ದು ಕೋವಿಡ್ -19 ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿರುವುದರಿಂದ ಹಾಗೂ 14 ದಿನಗಳ ಕ್ವಾರಂಟೈನ್ ಅವಧಿ ಮುಕ್ತಾಯಗೊಂಡಿರುವುದರಿಂದ ಮೇ 29 ರಂದು ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭ ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ಬೇಬಿ ಸುವರ್ಣ, ಪಿ.ಡಿ.ಓ ರಾಘವೇಂದ್ರ ಪಾಟೀಲ, ಕಾರ್ಯದರ್ಶಿ ಯಶೋಧರ ಶೆಟ್ಟಿ, ಪಂಚಾಯತ್ ಸದಸ್ಯರು, ಅರೋಗ್ಯ ಕಾರ್ಯಕರ್ತರು ಉಪಸ್ಥಿತರಿದ್ದರು