HomePage_Banner_
HomePage_Banner_
HomePage_Banner_

ಡಿಕೆಸಿ ಪದಗ್ರಹಣ: ಕಾಂಗ್ರೆಸ್ ಸಮಾಲೋಚನಾ ಸಭೆ

Advt_NewsUnder_1

  ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡು ಪದಗ್ರಹಣ ಸ್ವೀಕರಿಸಲಿರುವ ಡಿ.ಕೆ ಶಿವಕುಮಾರ್‍ರವರ ಪ್ರತಿಜ್ಞಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಸಮಾಲೋಚನಾ ಸಭೆ ಜೂ.1ರಂದು ಶ್ರೀ ಗುರುನಾರಾಯಣ ಸಭಾಭವನ ಬೆಳ್ತಂಗಡಿಯಲ್ಲಿ ನಡೆಯಿತು.
ಸಂಪೂರ್ಣ ಸಾಮಾಜಿಕ ಜಾಲತಾಣ ಆಧಾರಿತವಾಗಿ ನಡೆಯಲಿರುವ ಈ ಕಾರ್ಯಕ್ರಮದ ಬಗ್ಗೆ ತಯಾರಿ ರೂಪುರೇಷೆಯ ಬಗ್ಗೆ ಅಭಿಪ್ರಾಯ ಸಂಗ್ರಹ ಮಾಡಲಾಯಿತು. ಕಾರ್ಯಕ್ರಮ ಯಾವ ರೀತಿ ಸಾಗಬೇಕೆಂದು ಮಾಹಿತಿ ಹಾಗೂ ನಿರ್ವಹಣೆಯ ವಿಸ್ತೃತ ಮಾರ್ಗದರ್ಶನವನ್ನು ನಾಯಕರು ನೀಡಿದರು.
ಕಾರ್ಯಕ್ರಮದಲ್ಲಿ ದ.ಕÀ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರೂ ವಿಧಾನಪರಿಷತ್‍ನ ಶಾಸಕರಾದ ಕೆ. ಹರೀಶ್ ಕುಮಾರ್, ಜಿಲ್ಲಾ ಯುವ ಕಾಂಗ್ರೆಸ್‍ನ ಅಧ್ಯಕ್ಷ ಮಿಥುನ್ ರೈ, ವಿಧಾನಪರಿಷತ್ ಸದಸ್ಯ ಐವನ್ ಡಿ’ ಸೋಜ, ಕ್ಷೇತ್ರದ ಮಾಜಿ ಶಾಸಕ ಕೆ. ವಸಂತ ಬಂಗೇರ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಅಧÀ್ಯಕ್ಷ ಶೈಲೇಶ್ ಕುಮಾರ್ ಕುರ್ತೋಡಿ, ಗ್ರಾಮೀಣ ಅಧ್ಯಕ್ಷ ರಂಜನ್ ಜಿ. ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್, ಕೆಪಿಸಿಸಿ ಸದಸ್ಯ ರಾಮಚಂದ್ರ ಗೌಡ, ಮಹಿಳಾ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷೆ ಉಷಾ ಶರತ್, ನಗರ ಅಧ್ಯಕ್ಷೆ ಹಾಜಿರಾ, ಕಾಂಗ್ರೆಸ್‍ಎಸ್ಸಿ ಘಟಕದ ಅಧ್ಯಕ್ಷ ಬಿ.ಕೆ ವಸಂತ್, ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಅಶ್ರಫ್ ನೆರಿಯ, ತಾ. ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ವೀಕ್ಷಕರಾದ ಹರೀಶ್ ಕಿಣಿ, ಗಫೂರ್, ಥೋಮಸ್ ಜಿಲ್ಲಾ ಹಾಗೂ ತಾಲೂಕು,ನಗರ ಪಂಚಾಯತ್ ಸದಸ್ಯರು ಪಂಚಾಯತ್ ಸದಸ್ಯರುಗಳು ಹಾಗೂ ಎಲ್ಲಾ ಗ್ರಾಮೀಣ ಮತ್ತು ನಗರ ವಿಭಾಗದ ಪದಾದಿಕಾರಿಗಳು,ಸ್ಥಳೀಯ ಸಂಸ್ಥೆಯ ಚುನಾಯಿತ ಪ್ರತಿನಿಧಿಗಳು,ಎಪಿಎಂಸಿ ಸದಸ್ಯರು,ಸೇವಾ ಸಹಕಾರಿ ಬ್ಯಾಂಕ್ ನಿರ್ದೇಶಕರು,ದೇವಸ್ಥಾನ ಆಡಳಿತ ಸಮಿತಿ ಸದಸ್ಯರು, ಸಾಮಾಜಿಕ ಜಾಲತಾಣ ವಿಭಾಗದ ಸಂಚಾಲಕರು, ಗ್ರಾಮವಾರು ಸಂಚಾಲಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.