HomePage_Banner_
HomePage_Banner_
HomePage_Banner_

ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರಥಮ ಮತ್ತು ದ್ವಿತೀಯ ಪದವಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಿಲ್ಲದೇ ಪಾಸ್

Advt_NewsUnder_1

ಬೆಳ್ತಂಗಡಿ: ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಪ್ರಥಮ ಹಾಗೂ ದ್ವಿತೀಯ ವರ್ಷದ ಪದವಿ ತರಗತಿಗಳಿಗೆ ಪರೀಕ್ಷೆ ನಡೆಸದಿರಲು ಕೇಂದ್ರ ಸರಕಾರ ತೀರ್ಮಾನ ಕೈಗೊಂಡಿದೆ ಎಂದು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ರಮೇಶ್ ಪೋಖ್ರಿಯಾಲ್ ಸ್ಪಷ್ಟಪಡಿಸಿದ್ದಾರೆ.

ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದಾಗಿ ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಪದವಿ ಪರೀಕ್ಷೆಯ ಕುರಿತು ಗೊಂದಲಗಳು ಏರ್ಪಟ್ಟಿವೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಸಂಸ್ಥೆಗಳ ಉಪನ್ಯಾಸಕರು, ಪ್ರಾಧಾಪ್ಯಕರು ಹಾಗೂ ಪ್ರೊಫೆಸರ್‌ಗಳ ಜೊತೆಗೆ ಆನ್‌ಲೈನ್ ಮೂಲಕ ಸಂವಾದ ನಡೆಸಿ ಈ ತೀರ್ಮಾನ ಕೈಕೊಳ್ಳಲಾಗಿದೆ.

ಪ್ರಥಮ ಹಾಗೂ ದ್ವಿತೀಯ ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಮೊದಲ ಸೆಮಿಸ್ಟರ್ ನಲ್ಲಿ ಪಡೆದಿರುವ ಅಂಕ ಹಾಗೂ ಹಿಂದಿನ ಶೈಕ್ಷಣಿಕ ದಾಖಲೆಗಳನ್ನು ಆಧರಿಸಿ ದ್ವಿತೀಯ ಪದವಿ ತರಗತಿಗೆ ಹಾಗೂ ಶೈಕ್ಷಣಿಕ ಸಾಧನೆಯ ಶೇ.೫೦ರಷ್ಟು ಅಂಕ ಹಾಗೂ ಶೇ.೫೦ರಷ್ಟು ಇಂಟರ್ನಲ್ ಅಂಕವನ್ನು ಆಧರಿಸಿ ಅಂತಿಮ ಪದವಿ ತರಗತಿಗೆ ಪ್ರಮೋಷನ್ ನೀಡಲಾಗುತ್ತದೆ. ಅಂತಿಮ ವರ್ಷದ ಪದವಿ ತರಗತಿಗಳಿಗೆ ಪರೀಕ್ಷೆಗಳನ್ನು ಜುಲೈ ತಿಂಗಳಿನಲ್ಲಿ ಪರೀಕ್ಷೆ ನಡೆಸಲು ಸಿದ್ದತೆ ಮಾಡಿಕೊಳ್ಳಲಾಗಿದೆ. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಪರೀಕ್ಷೆಗಳು ಮುಂದೂಡಿಕೆಯಾದರೂ ಕೂಡ ಅಂತಿಮ ವರ್ಷದ ಪದವಿ ತರಗತಿಗಳು ನಡೆಯುವುದು ನಿಶ್ಚಿತ. ಆದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ಅಂತಿಮ ಪದವಿ ತರಗತಿಯ ಪರೀಕ್ಷೆಗೆ ಕಡ್ಡಾಯವಾಗಿ ಹಾಜರಾಗಬೇಕು. ವಿದ್ಯಾರ್ಥಿಗಳಿಗೆ ಪರೀಕ್ಷೆಯ ಕುರಿತು ಯಾವುದೇ ರೀತಿಯ ಅನುಮಾನಗಳಿದ್ದರೆ ಯುಜಿಸಿ ಕಾರ್ಯಪಡೆಯನ್ನು ಸಂಪರ್ಕಿಸಬಹುದೆಂದು ಅವರು ತಿಳಿಸಿದರು.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.