ಬೆಳ್ತಂಗಡಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ವಲಯ ಅರಣ್ಯಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇವರ ಸಹಕಾರದಲ್ಲಿ ಜೂನ್ 5ರಂದು ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಹಿರಿಯ ಸಿವಿಲ್ ನ್ಯಾಯಾಧೀಶ ನಾಗೇಶ್ ಮೂರ್ತಿ ನ್ಯಾಯಾಲಯದ ಆವರಣದಲ್ಲಿ ಗಿಡ ನೆಡುವ ಮೂಲಕ ಉದ್ಘಾಟಿಸಿದರು.
ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಸುಬ್ಬಯ್ಯ ನಾಯ್ಕರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಕೆ. ಎಂ. ಸತೀಶ್, ಬೆಳ್ತಂಗಡಿ ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಲೋಷಿಯಸ್ ಲೋಬೋ, ಕಾರ್ಯದರ್ಶಿ ಕೆ. ಕೃಷ್ಣ ಶೆಣೈ, ಸಹಾಯಕ ಸರಕಾರಿ ಅಭಿಯೋಜಕರಾದ ಜಿ. ಕೆ. ಕಿರಣ್ ಕುಮಾರ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಸತೀಶ್ ಕೆ. ಜಿ. ಹಾಗೂ ದಿವ್ಯರಾಜ್, ವಕೀಲರುಗಳು, ನ್ಯಾಯಾಲಯದ ಸಿಬ್ಬಂದಿವರ್ಗದವರು ಭಾಗವಹಿಸಿದ್ದರು.