ಕಲ್ಮಂಜದಲ್ಲಿ ಕಾಣಿಸಿಕೊಂಡ ಕೊರೊನಾ

ಬೆಳ್ತಂಗಡಿ: ಕೊರೊನಾ ಮಹಾಮಾರಿ ಕಲ್ಮಂಜ ಮತ್ತು ಸಾವ್ಯ ಗ್ರಾಮದಲ್ಲಿ ಕಾಣಿಸಿಕೊಂಡಿದ್ದು  ಕುಕ್ಕೆಮಜಲು ಎಂಬಲ್ಲಿನ ವ್ಯಕ್ತಿಯೋರ್ವರಲ್ಲಿ ಹಾಗೂ ಸಾವ್ಯದ 30 ವರ್ಷದ ವ್ಯಕ್ತಿಗೆ ಜೂ.6 ರಂದು ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.

24 ದಿನಗಳ ಹಿಂದೆ ಮಹಾರಾಷ್ಟ್ರದಿಂದ ಬಂದಿದ್ದ ವ್ಯಕ್ತಿ, 14 ದಿನಗಳ ಸರಕಾರಿ ಕ್ವಾರಂಟೈನ್ ನ್ನು ಕಾರ್ಕಳದಲ್ಲಿ ಮುಗಿಸಿ, ಸಾವ್ಯದ ವ್ಯಕ್ತಿ ಉಡುಪಿಯಲ್ಲಿ ಕ್ವಾರೆಂಟೈನ್ ಮುಗಿಸಿ ಮನೆಗೆ ಆಗಮಿಸಿದ್ದರು.ಶನಿವಾರ ಅವರ ಕೋವಿಡ್19 ವರದಿ ಬಂದಿದ್ದು ಸೋಂಕು ದೃಢಪಟ್ಟಿದೆ.

ಮುಂಡಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಮತ್ತು ಸಿಬ್ಬಂದಿ ಹಾಗೂ ಕಲ್ಮಂಜ ಗ್ರಾಮ ಪಂಚಾಯತಿ ಹಾಗೂ ಸಿಬ್ಬಂದಿ ವರ್ಗದವರು ಸ್ಥಳಕ್ಕೆ ತೆರಳಿ ಮನೆಯನ್ನು ಸೀಲ್ ಡೌನ್ ಮಾಡಿದ್ದು, 8 ಜನ ಮನೆಮಂದಿಯನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಸೋಂಕಿತ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಜಿಲ್ಲಾ ಕೋವಿಡ್19 ಆಸ್ಪತ್ರೆಗೆ ದಾಖಲಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.