ಎಸ್ ಡಿಎಂ ಪಾಲಿಟೆಕ್ನಿಕ್ ನಿಂದ ಆಟೋಮ್ಯಾಟಿಕ್ ಹ್ಯಾಂಡ್ ಸ್ಯಾನಿಟೈಸರ್

ಬೆಳ್ತಂಗಡಿ: ಅತ್ಯಂತ ಕಡಿಮೆ ವೆಚ್ಚದಲ್ಲಿ ಆಟೋಮ್ಯಾಟಿಕ್ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್ ಯಂತ್ರವನ್ನು ಉಜಿರೆ ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕರು ಆವಿಷ್ಕಾರಿಸಿದ್ದಾರೆ.

ಕೊರೋನಾ ಲಾಕ್‍ಡೌನ್ ಹಲವು ರೀತಿಯ ಹೊಸ ಅನ್ವೇಷಣೆಗಳಿಗೂ ಕಾರಣವಾಗಿರುವ ಸುದ್ದಿ ಅಲ್ಲೊಂದು, ಇಲ್ಲೊಂದು ಕಾಣಸಿಕೊಳ್ಳುತ್ತಲೇ ಇದೆ. ಇದಕ್ಕೆ ಹೊಸ ಸೇರ್ಪಡೆ ಉಜಿರೆಯಂತಹ ಗ್ರಾಮೀಣ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ‘ಎಸ್. ಡಿ. ಎಂ ಪಾಲಿಟೆಕ್ನಿಕ್’ ಕಾಲೇಜಿನ ಅಂಗಳದಿಂದ ಬಂದಿದೆ. ಇಲ್ಲಿ ವಿದ್ಯಾರ್ಥಿಗಳಿಗೆ ಹೊಸ ಅನ್ವೇಷಣೆಗಳಿಗೆ ಪ್ರೇರೇಪಣೆ ನೀಡುವ ಪ್ರಾಧ್ಯಾಪಕ ಬಳಗ ಎಲ್ಲರೂ ಸುಲಭವಾಗಿ ಬಳಸಬಹುದಾದ ‘ಆಟೋಮ್ಯಾಟಿಕ್ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸರ್’ಗಳನ್ನು ತಯಾರಿಸಿದೆ. ವಿಶೇಷ ಅಂದ್ರೆ ಇದು ಮಾರುಕಟ್ಟೆ ಬೆಲೆಗಿಂತ ಅತ್ಯಂತ ಕಡಿಮೆ ದರದಲ್ಲಿ ಸಿದ್ಧಪಡಿಸಲಾಗಿದ್ದು, ಜನಸಾಮಾನ್ಯರಿಗೆ, ಸಂಘ-ಸಂಸ್ಥೆಗಳಿಗೆ ಹೀಗೆ ಎಲ್ಲರಿಗೂ ಬಳಕೆಗೆ ಯೋಗ್ಯವಾಗಿದೆ.

ಈ ಅನ್ವೇಷಣೆಯ ಹಿಂದಿರುವುದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಡಾ. ಬಿ. ಯಶೋವರ್ಮ ಅವರ ಮಾರ್ಗದರ್ಶನ. ಮತ್ತು ಉಜಿರೆಯ ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವರ್ಗದ ಕಾರ್ಯವೈಖರಿ. ಇವರ ಪ್ರಯತ್ನದಿಂದ ಈ ಅಟೋಮ್ಯಾಟಿಕ್ ಹ್ಯಾಂಡ್ ಸ್ಯಾನಿಟೈಸರ್ ಡಿಸ್ಪೆನ್ಸೆರ್ ತಯಾರಿಸಲಾಗಿದೆ.

ಎಸ್.ಡಿ.ಎಂ ಪಾಲಿಟೆಕ್ನಿಕ್ ಕಾಲೇಜು ತಯಾರಿಸಿದ ಪ್ರಥಮ ಆಟೋಮ್ಯಾಟಿಕ್ ಸ್ಯಾನಿಟೈಸರ್ ಡಿಸ್ಪೆನ್ಸರ್ ಯಂತ್ರವನ್ನು ಧರ್ಮಸ್ಥಳಕ್ಕೆ ಅರ್ಪಿಸಲಾಗಿದೆ. ಇದನ್ನು ಪರೀಕ್ಷಿಸಿದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಮೆಚ್ಚುಗೆ ವ್ಯಕ್ತಪಡಿಸಿ ಮತ್ತಷ್ಟು ಅನ್ವೇಷಣೆಗಳನ್ನು ನಡೆಸಲು ಪ್ರೋತ್ಸಾಹಿಸಿದ್ದು ನಮಗೆ ಹುಮ್ಮಸ್ಸು ನೀಡಿದೆ ಎಂದು ಕಾಲೇಜಿನ ಪ್ರಾಚಾರ್ಯರು ಹಾಗೂ ಸಿಬ್ಬಂದಿ ಸಂತಸ ವ್ಯಕ್ತಪಡಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.