ಕೃಷಿ ಭೂಮಿ ಖರೀದಿಗೆ ಅಸ್ತು


ರಾಜ್ಯದಲ್ಲಿ ಇನ್ನು ಮುಂದೆ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವವರಿಗೆ ಅನುಕೂಲ ಮಾಡಿಕೊಡುವಂತೆ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತರುವ ಮಹತ್ವದ ನಿರ್ಧಾರವನ್ನು ಸರಕಾರ ಕೈಗೊಂಡಿದೆ. ಕೃಷಿ ಭೂಮಿ ಖರೀದಿಸಲು ವಿಧಿಸಿರುವ ನಿರ್ಬಂಧಗಳನ್ನು ತೆಗೆದುಹಾಕಿ ಯಾರು ಬೇಕಾದರೂ ರಾಜ್ಯದಲ್ಲಿ ಕೃಷಿ ಭೂಮಿಯನ್ನು ಖರೀದಿಸಿ ಕೃಷಿ ಕಾರ್ಯ ಕೈಗೊಳ್ಳಬಹುದಾಗಿದೆ.
ಕಾನೂನು ಸಚಿವ ಮಾಧುಸ್ವಾಮಿ ಸರಕಾರದ ನಿರ್ಧಾರ ಕುರಿತ ಮಾಹಿತಿಯನ್ನು ಸಭೆಯ ಬಳಿಕ ಸುದ್ದಿಗಾರರಿಗೆ ನೀಡಿದರು. ಆಂಧ್ರ ಪ್ರದೇಶ, ತೆಲಂಗಾನ, ಮಹಾರಾಷ್ಟ್ರ, ತಮಿಳುನಾಡು ಹಾಗೂ ಕೇರಳದಲ್ಲಿ ಭೂಮಿ ಖರೀದಿಗೆ ಯಾವುದೇ ನಿರ್ಬಂಧವಿರಲಿಲ್ಲ, ಅಂತಹ ಯಾವುದೇ ಖಾಯಿದೆಗಳಿರಲಿಲ್ಲ. ದಕ್ಷಿಣ ಭಾರತದ ಎಲ್ಲಾ ರಾಜ್ಯಗಳಲ್ಲೂ ಕೃಷಿಯೇತರರಿಗೆ ಕೃಷಿ ಜಮೀನು ಖರೀದಿಸುವುದಕ್ಕೆ ಅವಕಾಶವಿದೆ. ಅದೇ ರೀತಿ ನಮ್ಮಲ್ಲೂ ಕಾಯ್ದೆಗೆ ತಿದ್ದುಪಡಿ ತರಲು ಸಂಪುಟ ನಿರ್ಧರಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.