ಎಸ್.ಎಸ್.ಎಲ್.ಸಿ ಪರೀಕ್ಷೆ; ಸಹಾಯವಾಣಿ ಆರಂಭ

ಬೆಳ್ತಂಗಡಿ: ಜೂ.25 ರಿಂದ ಆರಂಭಗೊಳ್ಳಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಮಕ್ಕಳ ಹಾಗೂ ಪೋಷಕರ ಅನುಕೂಲಕ್ಕಾಗಿ ತಾಲೂಕು ಮಟ್ಟದಲ್ಲಿ ಸಹಾಯ ವಾಣಿಯನ್ನು ತೆರೆಯಲಾಗಿದೆ.

ಪರೀಕ್ಷೆಗೆ ಸಂಬಂಧಿಸಿದಂತೆ ಪರೀಕ್ಷಾ ಕೇಂದ್ರ, ಪರೀಕ್ಷಾ ಕೇಂದ್ರದಲ್ಲಿರುವ ಸೌಲಭ್ಯಗಳು ಹಾಗೂ ಪರೀಕ್ಷೆ ಬರುವ ವಿದ್ಯಾರ್ಥಿಗಳು ಅನುಸರಿಸಬೇಕಾದ ಕ್ರಮಗಳು ಹಾಗೂ ದೂರದ ಗ್ರಾಮಗಳಿಂದ ಕೇಂದ್ರಕ್ಕೆ ಬರುವ ವಿದ್ಯಾರ್ಥಿಗಳಿಗೆ ಬಸ್ಸಿನ ವ್ಯವಸ್ಥೆ ಸೇರಿದಂತೆ ಯಾವುದಾದರೂ ಮಾಹಿತಿ ಹಾಗೂ ಸಮಸ್ಯೆಗಳಿದ್ದಲ್ಲಿ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಸಹಾಯವಾಣಿ ಬಿ.ಇ.ಒ ಕಚೇರಿ ದೂರವಾಣಿ-08256-232004 ಅಥವಾ ನೋಡೆಲ್ ಅಧಿಕಾರಿ ಮೊಬೈಲ್-9008763829ನ್ನು ಸಂಪರ್ಕಿಸಬಹುದು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.