ಕೊರೂನಾ ತಡೆಗಟ್ಟುವಲ್ಲಿ ಕೇಂದ್ರ-ರಾಜ್ಯ ಸರಕಾರ ಸಂಪೂಣ೯ ವಿಫಲ

Advt_NewsUnder_1
Advt_NewsUnder_1
Advt_NewsUnder_1

 

 

ಬೆಳ್ತಂಗಡಿ:  ಭಾರತವನ್ನು  ವಿಶ್ವಗುರು ಮಾಡುತ್ತೇವೆ ಎಂದ ಪ್ರಧಾನಿ  ಮೋದಿ ಯವರು, ಕೊರೋನಾ ವೈರಸ್ ತಡೆಗಟ್ಟಲು ವಾಸವಾಗಿದ್ದಾರೆ  ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ, ದ.ಕ ಜಿಲ್ಲಾ ಕಾರ್ಯದರ್ಶಿ ವಸಂತ ಆಚಾರಿ ವ್ಯಂಗ್ಯವಾಡಿದರು.

ಅವರು  ಜೂ.16 ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ದೇಶವು ಹಿಂದೆಂದಿಗಿಂತಲೂನ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದೆ. ಕೊರೋನಾ ವೈರಸ್ ವ್ಯಾಪಕಗೊಳ್ಳುತ್ತಿದ್ದರೂ ಅದನ್ನು ತಡೆಗಟ್ಟುವಲ್ಲಿ ನರೇಂದ್ರ ಮೋದಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಲಾಕ್ ಡೌನ್ ನಿಂದಾಗಿ ಸಾಮಾನ್ಯ ಜನರ ಬದುಕು , ವಲಸೆ ಕಾರ್ಮಿಕರು , ದುಡಿಯುವ ವರ್ಗದ ಜನರ ಅತ್ಯಂತ ದುಸ್ತರಗೊಂಡಿದೆ. ಆಹಾರವಿಲ್ಲದೆ ಜನರು ಸಾಯುತ್ತಿರುವ ಘಟನೆಗಳು ನಡೆಯುತ್ತಿದೆ. ಮೂಲಕ ಇಡೀ ಜಗತ್ತಿನ ಮುಂದೆ ದೇಶದ ಮಾನ ಹರಾಜು ಹಾಕಲಾಗಿದೆ ಎಂದು ಆರೋಪಿಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ(ಎಂ) ತಾಲೂಕು ಕಾರ್ಯದರ್ಶಿ ಶಿವಕುಮಾರ್ ಎಸ್. ಎಂ ಕೇಂದ್ರ, ರಾಜ್ಯ ಸರ್ಕಾರಗಳು ಸಾರ್ವಜನಿಕ ವಲಯದ ಸಂಸ್ಥೆಗಳನ್ನು ಖಾಸಗೀಕರಣಗೊಳಿಸುವ ಮೂಲಕ ಕಾರ್ಮಿಕ ಕಾನೂನುಗಳನ್ನು ಬದಲಾವಣೆ ಮಾಡಲು ಹೊರಟಿದೆ. ಬಹುರಾಷ್ಟ್ರೀಯ ಕಂಪನಿಗಳಿಗೆ ರತ್ನಗಂಬಳಿ ಹಾಸುವ ಮೂಲಕ ಇಡೀ ದೇಶವನ್ನು ಮಾರಾಟ ಮಾಡಲು ಮುಂದಾಗಿದೆ ಎಂದರು.

ಎಲ್ಲಾ ಕುಟುಂಬಗಳಿಗೆ 6 ತಿಂಗಳ ಕಾಲ ಮಾಸಿಕ 7500 ರೂಪಾಯಿ ನೀಡಬೇಕು , ಪ್ರತಿ ವ್ಯಕ್ತಿಗೆ ತಿಂಗಳಿಗೆ 10 ಕೆಜಿಯಂತೆ 6 ತಿಂಗಳ ಕಾಲ ಉಚಿತ ಆಹಾರ ಧಾನ್ಯಗಳನ್ನು ವಿತರಿಸಬೇಕು , ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೆಚ್ಚಿಸಿದ ವೇತನದೊಂದಿಗೆ ವಾರ್ಷಿಕ 200 ದಿನಗಳ ಉದ್ಯೋಗ ನೀಡಬೇಕು , ನಿರುದ್ಯೋಗಿಗಳಿಗೆ ನಿರುದ್ಯೋಗ ಭತ್ಯೆ ನೀಡಬೇಕು , ರಾಷ್ಟ್ರೀಯ ಆಸ್ತಿಗಳ ಲೂಟಿಯನ್ನು , ಸಾರ್ವಜನಿಕ ವಲಯದ ಖಾಸಗೀಕರಣವನ್ನು , ಕಾರ್ಮಿಕ ಕಾನೂನುಗಳನ್ನು ರದ್ದು ಮಾಡುವುದನ್ನು ನಿಲ್ಲಿಸಬೇಕು ಎಂದು ಒತ್ತಾಯಿಸಿ ಬೆಳ್ತಂಗಡಿ ತಹಶಿಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯ ನೇತೃತ್ವವನ್ನು ಸಿಪಿಐ(ಎಂ) ತಾಲೂಕು ಸಮಿತಿ ಸದಸ್ಯರಾದ ವಸಂತ ನಡ , ಶೇಖರ್ ಲಾಯಿಲ , ನ್ಯಾಯವಾದಿ ಸುಕನ್ಯಾ ಹೆಚ್ , ಸುಜೀತ್ ಉಜಿರೆ , ರೈತ ಮುಖಂಡ ಸೆಲಿಮೋನ್ ಪುದುವೆಟ್ಟು , ಶ್ರಮಶಕ್ತಿ ಸ್ವಸಹಾಯ ಗುಂಪಿನ ಸಂಯೋಜಕ ಸಂಜೀವ ಆರ್ , ಮಹಿಳಾ ಮುಖಂಡರಾದ ಕುಸುಮ ಮಾಚಾರು, ಸುಧಾ ಕೆ ರಾವ್ ಅತ್ತಾಜೆ ಮೊದಲಾದವರು ವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.