ರಾಹುಲ್ ಗಾಂಧಿ ಜನ್ಮದಿನಾಚಣೆ ಪ್ರಯುಕ್ತ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಹಣ್ಣುಹಂಪಲು ವಿತರಣೆ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಎಐಸಿಸಿ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ವರಿಷ್ಠ ರಾಹುಲ್ ಗಾಂಧಿ ಅವರ ಜನ್ಮ ದಿನಾಚರಣೆ ಪ್ರಯುಕ್ತ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಘಟಕದ ವತಿಯಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ ನಡೆಸಲಾಯಿತು.

ಬೆಳ್ತಂಗಡಿ ಸಮುದಾಯ ಸಾರ್ವಜನಿಕ ಆಸ್ಪತ್ರೆಯ ಎಲ್ಲ ಒಳರೋಗಿಗಳಿಗೆ ಮತ್ತು ನಗರದಲ್ಲಿರುವ ಅನುಗ್ರಹ ವೃದ್ದ ಸಂರಕ್ಷಣಾ ಕೇಂದ್ರದ ಎಲ್ಲ ಫಲಾನುಭವಿಗಳಿಗೆ ಹಣ್ಣುಹಂಪಲು ವಿತರಣೆ ಮಾಡಲಾಯಿತು.

ಮಾಜಿ ಶಾಸಕ ವಸಂತ ಬಂಗೇರ, ಬ್ಲಾಕ್ ಕಾಂಗ್ರೆಸ್ ನಗರ ಘಟಕದ ಅಧ್ಯಕ್ಷ ಶೈಲೇಶ್ ಕುಮಾರ್ ಕುರ್ತೋಡಿ, ಗ್ರಾಮೀಣ ಘಟಕದ ಅಧ್ಯಕ್ಷ ರಂಜನ್ ಜಿ ಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್ ಕುಮಾರ್, ಪ್ರಮುಖರಾದ ಎಂ. ಉಮರಬ್ಬ ಮದ್ದಡ್ಕ, ನಾಗರಾಜ್ ಲಾಯಿಲ, ಅಲ್ಪ ಸಂಖ್ಯಾತರ ಘಟಕದ ಅಧ್ಯಕ್ಷ ಅಶ್ರಫ್ ನೆರಿಯ, ಎಪಿಎಂಸಿ ಮಾಜಿ ಅಧ್ಯಕ್ಷ ಭರತ್ ಕುಮಾರ್ ಬಂಗಾಡಿ, ಪ್ರಮುಖರಾದ ಪ್ರಜ್ವಲ್ ನಾವರ, ಉಬೈದ್ ಮಯ್ಯದಿ ಲಾಯಿಲ, ನಝೀರ್ ಶಕ್ತಿನಗರ, ಉಮೇಶ್ ಕಲ್ಲಣಿ ಹಾಗೂ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗಿಯಾಗಿದ್ದರು. ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.‌ ವಿದ್ಯಾವತಿ ಸಹಕಾರ ನೀಡಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.