ಬೆಳ್ತಂಗಡಿ ನ್ಯಾಯಾಲಯದಲ್ಲಿ “ವಿಶ್ವ ಯೋಗ ದಿನಾಚರಣೆ”

Advt_NewsUnder_1
Advt_NewsUnder_1

ಬೆಳ್ತಂಗಡಿ: ಜಿಲ್ಲಾ ಕಾನೂನು ಸೇವೆಗಳ ಸಮಿತಿ ಮತ್ತು ಬೆಳ್ತಂಗಡಿ ವಕೀಲರ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಯೋಗ ದಿನಾಚರಣೆ ಜೂ.20ರಿಂದ 21ರವರೆಗೆ ನ್ಯಾಯಾಲಯದ ಆವರಣದಲ್ಲಿ ನಡೆಯಿತು.

ಕಾರ್ಯಕ್ರಮ ಉದ್ಘಾಟನೆಯನ್ನು ಹಿರಿಯ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶರಾದ ನಾಗೇಶ್ ಮೂರ್ತಿ ದೀಪ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿಗಳಾಗಿ ಕೆ.ಜಿ ಹೆಚ್ಚುವರಿ ಸಿವಿಲ್ ಮತ್ತು ಜೆ.ಎಮ್.ಎಫ್.ಸಿ ನ್ಯಾಯಾಧೀಶ ಸತೀಶ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ಎಲೋಸಿಯಸ್ ಎಸ್. ಲೋಬೋ, ಕಾರ್ಯದರ್ಶಿ ಕೆ. ಕೃಷ್ಣ ಶೆಣೈ, ಕಿರಣ್ ಕುಮಾರ್, ದಿವ್ಯರಾಜ್, ಬೆಳ್ತಂಗಡಿ ಸಹಾಯಕ ಸರ್ಕಾರಿ ಆಭಿಯೋಜಕರು, ಸಂಪನ್ಮೂಲ ವ್ಯಕ್ತಿಯಾಗಿ ಯೋಗ ಗುರು ಮಹೇಶ್ ಎನ್. ಪತ್ತಾರ್ ಯೋಗ ಕಾರ್ಯಕ್ರಮವನ್ನು ನಡೆಸಿಕೊಟ್ಟರು. ನ್ಯಾಯಾಲಯ ಸಿಬ್ಬಂದಿ ವಕೀಲರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು. ವಕೀಲರ ಸಂಘದ ಕಾರ್ಯದರ್ಶಿ ಕೃಷ್ಣ ಶೆಣೈ ನಿರೂಪಿಸಿದರು. ಸಂಘದ ಕಾರ್ಯಕಾರಿ ಸಮಿತಿ ಸದಸ್ಯೆ ಮಮ್ತಾಜ್ ಬೇಗಂ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.