ಮಂಜಲಪಲ್ಕೆ: ಹಿಂದೂ ರುದ್ರಭೂಮಿ ಲೋಕಾರ್ಪಣೆ ಕಾರ್ಯಕ್ರಮ

Advt_NewsUnder_1
Advt_NewsUnder_1

ಬೆಳ್ತಂಗಡಿ: ಇಲ್ಲಿನ ಮಡಂತ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇದರ ಸಹಯೋಗದಲ್ಲಿ ಮಂಜಲಪಲ್ಕೆಯಲ್ಲಿ ನಿರ್ಮಿಸಲಾದ ಹಿಂದೂ ರುದ್ರ ಭೂಮಿಯ ಲೋಕಾರ್ಪಣೆ ಕಾರ್ಯಕ್ರಮ ಜೂ.29 ರಂದು ಮಂಜಲಪಲ್ಕೆ ಹಿಂದೂ ರುದ್ರ ಭೂಮಿ ಆವರಣದಲ್ಲಿ ನಡೆಯಿತು.ಈ ರುದ್ರಭೂಮಿಯ ಲೋಕಾರ್ಪಣೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ನೆರವೇರಿಸಿದರು. ಅಧ್ಯಕ್ಷತೆಯನ್ನು ಮಡಂತ್ಯಾರು ಗ್ರಾ.ಪಂ ಅಧ್ಯಕ್ಷ ಗೋಪಾಲಕೃಷ್ಣ ಕೆ. ವಹಿಸಿದ್ದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಾಸಕ ಹರೀಶ್ ಕುಮಾರ್ ಮತ್ತು ಪ್ರತಾಪಸಿಂಹ ನಾಯಕ್, ಕುವೆಟ್ಟು ಜಿ.ಪಂ ಸದಸ್ಯೆ ಮಮತಾ ಎಂ ಶೆಟ್ಟಿ, ತಾ.ಪಂ ಸದಸ್ಯೆ ವಸಂತಿ ಲಕ್ಷ್ಮಣ ಕುಲಾಲ್, ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದ ಪ್ರಾದೇಶಿಕ ನಿರ್ದೇಶಕ ಎ. ಶ್ರೀಹರಿ, ಯೋಜನಾಧಿಕಾರಿ ಯಶವಂತ್ ಶೆಟ್ಟಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಯಂತಿ, ಪಂಚಾಯತ್ ಅಭಿವೃಧಿ ಅಧಿಕಾರಿ ನಾಗೇಶ್ ಎಂ,ಪಂಚಾಯತ್ ಸದಸ್ಯರು, ಸಿಬಂದಿ ಗಳು, ಊರವರು ಉಪಸ್ಥಿತರಿದ್ದರು. ಮಂಜಲಪಲ್ಕೆ ಹಿಂದೂ ರುದ್ರ ಭೂಮಿ ಅಧ್ಯಕ್ಷ ಸತೀಶ್ ಶೆಟ್ಟಿ ಸ್ವಾಗತಿಸಿ ಧರ್ಣಪ್ಪ ಗೌಡ ವಂದಿಸಿದರು ಉಮಾ ಟಿ. ಗೌಡ ನಿರೂಪಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.