ಡಿ.ಕೆ ಶಿವಕುಮಾರ್ ರವರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಕುರಿತು ಬೆಳ್ತಂಗಡಿ ಕಾಂಗ್ರೇಸ್ ಸಮಿತಿಯಿಂದ ಸಮಾಲೋಚನಾ ಸಭೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಜುಲೈ.2ರಂದು ಪ್ರಮಾಣವಚನ ಸ್ವೀಕರಿಸಲಿರುವ ಡಿ.ಕೆ ಶಿವಕುಮಾರ್ ರವರ ಪ್ರತಿಜ್ಞಾ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ತಾಲೂಕು ಕಾಂಗ್ರೆಸ್ ನ ಸಮಾಲೋಚನಾ ಸಭೆಯು ಜೂ.29 ರಂದು ಶ್ರೀ ಗುರುನಾರಾಯಣ ಸಭಾ ಭವನದಲ್ಲಿ ನಡೆಯಿತು.


ಜುಲೈ 2ರ ಅಭೂತಪೂರ್ಣ ಕಾರ್ಯಕ್ರಮದ ತಯಾರಿ ರೂಪುರೇಷೆಯ ಬಗ್ಗೆ ಮುಖಂಡರುಗಳು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಆಯಾ ಗ್ರಾಮವಾರು ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಬೇಕಾದ ಅಗತ್ಯ ಪರಿಕರಗಳು ಹಾಗೂ ಕಾರ್ಯಕ್ರಮದ ಮಾಹಿತಿ ಪ್ರತಿಯನ್ನು ಗ್ರಾಮವಾರು ಪ್ರಮುಖರಿಗೆ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕ
ವಸಂತ ಬಂಗೇರ, ಬ್ಲಾಕ್ ಕಾಂಗ್ರೆಸ್ ನಗರ ಅಧ್ಯಕ್ಷ ಶೈಲೇಶ್ ಕುಮಾರ್ ಕುರ್ತೋಡಿ, ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಅಧ್ಯಕ್ಷ ರಂಜನ್ ಜಿ ಗೌಡ, ಎಪಿಎಂಸಿ ಅಧ್ಯಕ್ಷ ಕೇಶವ ಗೌಡ ಬೆಳಾಲು, ವೀಕ್ಷಕರುಗಳಾದ ಕೃಷ್ಣಮೂರ್ತಿ, ಹರೀಶ್ ಕಿಣಿ, ಜಿಲ್ಲಾ ಪಂಚಾಯತ್ ಸದಸ್ಯರಾದ ಶಾಹುಲ್ ಹಮೀದ್, ಯುವ ಕಾಂಗ್ರೆಸ್ ಅಧ್ಯಕ್ಷ ಅಭಿನಂದನ್ ಹರೀಶ್, ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.