ಬಿಜೆಪಿ ಎಸ್.ಟಿ ಮೋರ್ಚಾದ ಜಿಲ್ಲಾಧ್ಯಕ್ಷರಾಗಿ ಚೆನ್ನಕೇಶವ ಅರಸಮಜಲು ನೇಮಕ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಎಸ್.ಟಿ ಮೋರ್ಚಾದ ಅಧ್ಯಕ್ಷರಾಗಿ ಚೆನ್ನಕೇಶವ ಅರಸಮಜಲು ಮುಂಡಾಜೆ ಅವರನ್ನು ನೇಮಕಗೊಳಿಸಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಎಂ ಆದೇಶ ನೀಡಿದ್ದಾರೆ. ಸಿವಿಲ್ ಗುತ್ತಿಗೆದಾರರಾಗಿರುವ ಚೆನ್ನಕೇಶವ ಅವರು ಪ್ರಸ್ತುತ ಮುಂಡಾಜೆ ಗ್ರಾಮ‌ ಪಂಚಾಯತ್ ಸದಸ್ಯರಾಗಿದ್ದಾರೆ.

ಸಾಮಾಜಿಕ ಸಂಘಟನೆಗಳಲ್ಲಿ ಗುರುತಿಸಿಕೊಂಡಿರುವ ಅವರು ಮುಂಡಾಜೆ ಶಾರದಾ ನಗರ ಶ್ರೀ ದುರ್ಗಾಪರಮೇಶ್ವರೀ‌ ದೇವಸ್ಥಾನದ ಆಡಳಿತ ಮಂಡಳಿಯ ಕೋಶಾಧಿಕಾರಿಯಾಗಿ ಧಾರ್ಮಿಕ ಕ್ಷೇತ್ರದಲ್ಲೂ ತೊಡಗಿಸಿಕೊಂಡಿದ್ದಾರೆ. ಜೊತೆಗೆ ತಾಲೂಕು ಮರಾಠಿ ಸಮಾಜ ಸೇವಾ ಸಂಘದ ಕಾರ್ಯದರ್ಶಿಯಾಗಿ, ಉಪಾಧ್ಯಕ್ಷರಾಗಿ ಹಿಂದೆ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಬೆಳ್ತಂಗಡಿ ಲ್ಯಾಂಪ್ಸ್ ಸೊಸೈಟಿಗೆ ಸತತ ಎರಡನೇ ಬಾರಿ ನಿರ್ದೇಶಕರಾಗಿ ಆಯ್ಕೆಗೊಂಡು ಸೇವೆ ಸಲ್ಲಿಸುತ್ತಿದ್ದಾರೆ.ಅತ್ಯುತ್ತಮ ಕಲಾವಿದರೂ ಆಗಿರುವ ಅವರು ಸಾಮಾಜಿಕ ಕಳಕಳಿಯನ್ನೂ ಹೊಂದಿದವರಾಗಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.