ಗುರುಪುರ ಬಂಗ್ಲಗುಡ್ಡೆಯಲ್ಲಿ ಗುಡ್ಡ ಕುಸಿದು ಮಕ್ಕಳ ದಾರುಣ ಸಾವು

Advt_NewsUnder_1
Advt_NewsUnder_1
Advt_NewsUnder_1

ಮಂಗಳೂರು ಹೊರವಲಯದ ಗುರುಪುರ ಬಳಿಗುಡ್ಡ ಕುಸಿತದಿಂದಾಗಿ ಇಬ್ಬರು ಮಕ್ಕಳು ಮಣ್ಣಿನಡಿ ಸಿಲುಕಿದ್ದರು. ಸತತ ಐದು ಗಂಟೆಯಿಂದ ಎನ್‍ಡಿಆರ್‍ಎಫ್ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದರು. ಇದೀಗ 16 ವರ್ಷದ ಅಣ್ಣ ಸಫ್ವಾನ್ ಹಾಗೂ 10 ವರ್ಷದ ತಂಗಿ ಸಹಲಾ ಇಬ್ಬರ ಮೃತ ದೇಹ ಪತ್ತೆಯಾಗಿವೆ.

ಈ ಮನೆಯಲ್ಲಿ ಸುಮಾರು 6 ಜನ ವಾಸವಿದ್ದರು. ಗುಡ್ಡ ಕುಸಿಯುತ್ತಿರುವುದು ತಿಳಿಯುತ್ತಿದ್ದಂತೆ ಮನೆಯವರು ಹೊರಗಡೆ ಓಡಿ ಬಂದಿದ್ದಾರೆ. ಆದರೆ ಇಬ್ಬರು ಮಕ್ಕಳು ಮನೆಯಲ್ಲಿ ಮಲಗಿದ್ದರು. ಹೀಗಾಗಿ ಮನೆಯಲ್ಲೇ ಮಣ್ಣಿನಡಿ ಸಿಲುಕಿ ಸಾವನ್ನಪ್ಪಿದ್ದಾರೆ. ಕಳೆದ ಮೂರ್ನಾಲ್ಕು ಗಂಟೆಗಳಿಂದ ರಕ್ಷಣಾ ಕಾರ್ಯ ಭರದಿಂದ ಸಾಗಿತ್ತು. ರಕ್ಷಣಾ ಕಾರ್ಯ ಸವಾಲಿನಿಂದ ಕೂಡಿತ್ತು. ಹೀಗಾಗಿ ಇಷ್ಟೇ ಸಮಯಕ್ಕೆ ಮುಗಿಯುತ್ತೆ ಎಂದು ಹೇಳಲು ಸಾಧ್ಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಸಿಂಧೂ.ಬಿ.ರೋಪೆಶ್ ತಿಳಿಸಿದ್ದರು. ಆದರೆ ಇದೀಗ ಇಬ್ಬರ ಮಕ್ಕಳ ಶವವನ್ನು ಹೊರಗಡೆ ತೆಗೆಯಲಾಗಿದೆ.

ಘಟನೆ ನಡೆಯುತ್ತಿದ್ದಂತೆ ಗುಡ್ಡದ ಸುತ್ತ ಮುತ್ತ ಇದ್ದ 15 ಮನೆಯಲ್ಲಿದ್ದ ಜನರನ್ನು ಗಂಜಿ ಕೇಂದ್ರಕ್ಕೆ ರವಾನಿಸಲಾಗಿದೆ. ನಾಳೆ ತಜ್ಞರ ಸಮಿತಿ ತನಿಖೆ ನಡೆಸಿ ವರದಿ ನೀಡಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.