ಕೇಂದ್ರ ಮತ್ತು ರಾಜ್ಯ ಸರ್ಕಾರ ನೀತಿಯ ವಿರುದ್ಧ ಸಿಪಿಐ(ಎಂ) ಹೋರಾಟ

Advt_NewsUnder_1
Advt_NewsUnder_1

ಕೊರೋನಾ ವೈರಸ್ ತಡೆಗಟ್ಟಲು ಕೇಂದ್ರ, ರಾಜ್ಯ ಸರ್ಕಾರಗಳು ವಿಫಲವಾಗಿದ್ದು , ಎರಡೂ ಸರ್ಕಾರಗಳೂ ಸೋಂಕು ತಡೆಗಟ್ಟುವ ನೆಪದಲ್ಲಿ ಕೋಟ್ಯಾಂತರ ರೂಪಾಯಿ ಕೊಳ್ಳೆ ಹೊಡೆದಿದೆ ಎಂದು ಸಿಪಿಐ(ಎಂ) ತಾಲೂಕು ಕಾರ್ಯದರ್ಶಿ ಶಿವಕುಮಾರ್ ಎಸ್. ಎಂ ಆರೋಪಿಸಿದರು.ಅವರು ಸೋಮವಾರ ಸಿಪಿಐ(ಎಂ) ಬೆಳ್ತಂಗಡಿ ತಾಲೂಕು ಸಮಿತಿ ನೇತೃತ್ವದಲ್ಲಿ ಹೋರಾಟದ ವಾರಾಚರಣೆಯ ಭಾಗವಾಗಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

ಸಿಪಿಐ(ಎಂ) ತಾಲೂಕು ಸಮಿತಿ ಸದಸ್ಯ ವಸಂತ ನಡ ಮಾತನಾಡಿ ಲಾಕ್ ಡೌನ್ ನಿಂದಾಗಿ ದುಡಿಯುವ ವರ್ಗದ ಜನರ ಬದುಕು ಅತ್ಯಂತ ಹೀನಾಯ ಪರಿಸ್ಥಿತಿಗೆ ತಲುಪಿದೆ‌‌. ಇಂತಹ ಸಂದರ್ಭದಲ್ಲಿ ಕೇಂದ್ರ ರಾಜ್ಯ ಸರ್ಕಾರಗಳು ಜನಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿ ಎಂದರು.

ಸಿಪಿಐ(ಎಂ) ತಾಲೂಕು ಸಮಿತಿ ಸದಸ್ಯ ಶೇಖರ್ ಲಾಯಿಲ ಮಾತನಾಡಿ ಇಡೀ ಜಗತ್ತಿನಲ್ಲಿ ಭಾರತ ಕೊರೋನಾ ವೈರಸ್ ನಲ್ಲಿ 3 ನೇ ಸ್ಥಾನಕ್ಕೆ ಏರಿಕೆ ಕಂಡಿದೆ. ಕೇಂದ್ರ ಸರ್ಕಾರ ಆದರೂ ಸೋಂಕು ತಡೆಗಟ್ಟಲು ಯಾವುದೇ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿಲ್ಲ ಎಂದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ 19 ವೈರಾಣು ಪರೀಕ್ಷೆ ಮತ್ತು ಚಿಕಿತ್ಸೆಯನ್ನು ಉಚಿತವಾಗಿ ನೀಡಬೇಕು ಸೇರಿದಂತೆ 8 ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕೇಂದ್ರ, ರಾಜ್ಯ ಸರ್ಕಾರಕ್ಕೆ ಬೆಳ್ತಂಗಡಿ ತಹಶಿಲ್ದಾರರ ಮೂಲಕ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯ ನೇತೃತ್ವವನ್ನು ಅಕ್ಷರ ದಾಸೋಹ ನೌಕರರ ಸಂಘದ ಅಧ್ಯಕ್ಷೆ ಲಲಿತಾ ಮದ್ದಡ್ಕ , ಮುಖಂಡರಾದ ಸುಜೀತ್ ಉಜಿರೆ , ಕುಸುಮ ಮಾಚಾರು , ಕೃಷ್ಣ ನೆರಿಯ , ಮುದರ ಬಾರ್ಯ , ಸುಹಾಸ್ ಬೆಳ್ತಂಗಡಿ, ಪ್ರಶಾಂತ್ ಬೆಳ್ತಂಗಡಿ, ರೈತ ಸಂಘದ ಮುಖಂಡರಾದ ನಿಲೇಶ್ ಹೆಚ್ ಪೆರಿಂಜೆ , ಜಯನ್ ಮುಂಡಾಜೆ ವಹಿಸಿದ್ದರು.

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.