ಕೊರೊನಾ ಕಾಲಘಟ್ಟದಲ್ಲಿ ಕಾರ್ಮಿಕ ನೀತಿಗೆ ತಿದ್ದುಪಡಿ ಆಕ್ಷೇಪಾರ್ಹ: ಶಿವಕುಮಾರ್

Advt_NewsUnder_1
Advt_NewsUnder_1

ಬೆಳ್ತಂಗಡಿ ; ಕೇಂದ್ರ, ರಾಜ್ಯ ಸರ್ಕಾರಗಳು ಕೊರೋನಾ ಸೋಂಕು ವಿರುದ್ಧ ಜೀವದ ಹಂಗು ತೊರೆದು ಹೋರಾಡುತ್ತಿರುವ ಫ್ರಂಟ್ ಲೈನ್ ವಾರಿಯರ್ಸ್‌ ಗಳನ್ನು ಜೀತದಾಳುಗಳಂತೆ ದುಡಿಸುತ್ತಿದ್ದಾರೆ. ಈ ಕಾಲಘಟ್ಟದಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ಕಾರ್ಮಿಕ ಪರವಾದ ನೀತಿಗಳನ್ನು ಮಾಲೀಕರ ಪರವಾಗಿ ತಿದ್ದುಪಡಿ ಮಾಡಿದ್ದೇ ನಮ್ಮನಾಳುವ ಸರ್ಕಾರಗಳ ಸಾಧನೆ ಎಂದು ಸಿಐಟಿಯು ತಾಲೂಕು ಅಧ್ಯಕ್ಷ, ನ್ಯಾಯವಾದಿ ಶಿವಕುಮಾರ್ ಎಸ್. ಎಂ ಆರೋಪಿಸಿದರು.

ಅವರು ಜು.3 ರಂದು ಬೆಳ್ತಂಗಡಿ ಮಿನಿ ವಿಧಾನಸೌಧದ ಎದುರು ಸಿಐಟಿಯು ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಸರ್ಕಾರ ಘೋಷಿಸಿರುವ ಪರಿಹಾರ ಪಡೆಯಲು ಹತ್ತಾರು ದಾಖಲೆಗಳನ್ನು ಹಾಜರು ಪಡಿಸಬೇಕಾಗಿದೆ ಎಂದು ಆರೋಪಿಸಿದ ಅವರು ದೇಶದಾದ್ಯಂತ ಉದ್ಯಮಗಳು ನಷ್ಟದಲ್ಲಿದ್ದು , ಜನರಿಗೆ ಯಾವುದೇ ಆದಾಯವಿಲ್ಲದಾಗಿದೆ. ಇಂತಹ ಸಂದರ್ಭದಲ್ಲಿ ಆದಾಯ ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಎಲ್ಲಾ ಕಾರ್ಮಿಕರಿಗೆ ಮಾಸಿಕ 7500 ರೂ ನೇರ ನಗದು ನೀಡಬೇಕು ಎಂದು ಒತ್ತಾಯಿಸಿದರು.

ಸಿಐಟಿಯು ತಾಲೂಕು ಕಾರ್ಯದರ್ಶಿ ವಸಂತ ನಡ ಮಾತನಾಡಿದರು. ಪ್ರತಿಭಟನೆಯ ನೇತೃತ್ವವನ್ನು ಸಿಐಟಿಯು ಮುಖಂಡರಾದ ಕೃಷ್ಣ ನೆರಿಯ, ನ್ಯಾಯವಾದಿ ಸುಕನ್ಯಾ ಹೆಚ್ , ಸುಧಾ ಕೆ ರಾವ್ ಕರ್ನಾಟಕ ಪ್ರಾಂತ ರೈತ ಸಂಘದ ಕಾರ್ಯದರ್ಶಿ ಸೆಲಿಮೋನು ಪುದುವೆಟ್ಟು ವಹಿಸಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.