ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಅದೇಶ

Advt_NewsUnder_1
Advt_NewsUnder_1

ಬೆಳ್ತಂಗಡಿ:ಕಳೆದ ವರ್ಷದ ಭಾರೀ ಮಳೆಗೆ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಪದೇ ಪದೆ ಭೂ ಕುಸಿತ ಉಂಟಾಗಿ ಸಂಚಾರಕ್ಕೆ ತೊಂದರೆ ಉಂಟಾಗಿತ್ತು. ರಸ್ತೆಗಳಿಗೆ ತಾತ್ಕಾಲಿಕ ತಡೆಗೋಡೆ ನಿರ್ಮಿಸಲಾಗಿದ್ದರೂ ಈ ವರ್ಷವೂ ಧರೆ ಕುಸಿತದ ಭೀತಿ ಇರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ.ಗೌತಮ್ ಬಗಾದಿ ಈ ರಸ್ತೆಯಲ್ಲಿ ವಾಹನಗಳ ರಾತ್ರಿ ಸಂಚಾರ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಒಂದೆಡೆ ಹವಾಮಾನ ಇಲಾಖೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಉತ್ತರ ಕನ್ನಡ, ಚಿಕ್ಕಮಗಳೂರು ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಜು.9 ಮತ್ತು 10ರಂದು ಅರೆಂಜ್ ಅಲರ್ಟ್ ಘೋಷಿಸಿದೆ. ಇನ್ನೊಂದೆಡೆ ಚಾರ್ಮಾಡಿ ರಸ್ತೆಯಲ್ಲಿ ಬೃಹತ್ ಗಾತ್ರದ ಮರಗಳು ಉರುಳಿ ಬೀಳುವ ಹಾಗೂ ಭೂ ಕುಸಿತವಾಗುವ ಸಂಭವನೆಗಳು ಇದೆ ಎಂದು ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಜಿಲ್ಲಾಧಿಕಾರಿಗೆ ವರದಿ ನೀಡಿದ್ದಾರೆ.

ಈ ಹಿನ್ನಲೆಯಲ್ಲಿ ಮುಂದಿನ ಆದೇಶ ಬರುವವರೆಗೂ ರಾಷ್ಟ್ರೀಯ ಹೆದ್ದಾರಿ 73ರ ಮಂಗಳೂರು- ತುಮಕೂರು ರಸ್ತೆಯ ಚಾರ್ಮಾಡಿ ಘಾಟಿ ಚಿಕ್ಕಮಗಳೂರು ಜಿಲ್ಲಾ ಗಡಿಯಿಂದ ಕೊಟ್ಟಿಗೆಹಾರವರೆಗೆ ಪ್ರತಿ ದಿನ ಸಂಜೆ 7ರಿಂದ ಬೆಳಿಗ್ಗೆ 5 ರ ವರೆಗೆ ಯಾವುದೇ ವಾಹನ ಸಂಚಾರ ನಿರ್ಬಂಧಿಸಿ ಜಿಲ್ಲಾಧಿಕಾರಿ ಡಾ.ಗೌತಮ್ ಆದೇಶ ಹೊರಡಿಸಿದ್ದಾರೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.