HomePage_Banner_
HomePage_Banner_

ವೇಣೂರು: ಸ್ವಯಂ ಪ್ರೇರಿತ ಬಂದ್‌ಗೆ ವರ್ತಕರ ಬೆಂಬಲ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ವೇಣೂರು: ಮಹಾಮಾರಿ ಕೊರೊನಾ ಗಲ್ಲಿಗಲ್ಲಿಗಳಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಪರಾಹ್ನ 2 ಗಂಟೆಯಿಂದ ಎಲ್ಲಾ ಅಂಗಡಿ ಮುಗ್ಗಟ್ಟುಗಳು ಹಾಗೂ ಆಟೋ ರಿಕ್ಷಾ ಸಂಚಾರವನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲು ವೇಣೂರು ವರ್ತಕರ ಸಂಘ ಹಾಗೂ ರಿಕ್ಷಾ ಚಾಲಕ-ಮಾಲಕ ಸಂಘ ಬೆಂಬಲ ಸೂಚಿಸಿದೆ.
ವೇಣೂರು ಗ್ರಾ.ಪಂ. ನಿಯೋಜಿತ ಅಧ್ಯಕ್ಷ ಅರುಣ್ ಕ್ರಾಸ್ತ ಅವರ ಅಧ್ಯಕ್ಷತೆಯಲ್ಲಿ ನಡೆದ ಕೊರೊನಾ ತಡೆಗಟ್ಟುವ ಬಗ್ಗೆ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ವೇಣೂರು ವರ್ತಕರ ಸಂಘದ ಅಧ್ಯಕ್ಷ ಕೆ. ಭಾಸ್ಕರ ಪೈ, ಕಾರ್ಯದರ್ಶಿ ಬಾಲಕೃಷ್ಣ ಭಟ್, ಕೋಶಾಧಿಕಾರಿ ಲುಕಾಸ್ ಕೊರೆಯಾ ಹಾಗೂ ರಿಕ್ಷಾ ಚಾಲಕ-ಮಾಲಕ ಸಂಘದ ಪದಾಧಿಕಾರಿಗಳಾದ ಆನಂದ, ಹರೀಶ್ ಹಾಗೂ ವಸಂತ್, ಗ್ರಾ.ಪಂ. ಸದಸ್ಯರು, ಆರೋಗ್ಯ ಕಾರ್ಯಕರ್ತೆಯರು, ಗ್ರಾಮಕರಣಿಕರು ಉಪಸ್ಥಿತರಿದ್ದರು. ಪಂಚಾಯತ್ ಸಿಬ್ಬಂದಿ ನಾರ್ಣಪ್ಪ ಗೌಡ ಸ್ವಾಗತಿಸಿ, ವಂದಿಸಿದರು. ಪಂ. ಅಭಿವೃದ್ಧಿ ಅಧಿಕಾರಿ ಪ್ರಾಸ್ತಾವಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.