HomePage_Banner_
HomePage_Banner_

ಸ್ವಯಂ ಪ್ರೇರಿತ ಲಾಕ್‌ಡೌನ್: ಬೆಳ್ತಂಗಡಿ ನಗರ ಸಮಾಲೋಚನಾ ಸಭೆ

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಕೊರೊನಾ ಮಾಹಾಮಾರಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಸ್ವಯಂ ಪ್ರೇರಿತ ಲಾಕ್ ಡೌನ್ ಮಾಡುವ ಬಗ್ಗೆ ಬೆಳ್ತಂಗಡಿ ನಗರ ಪಂಚಾಯತು ನೇತೃತ್ವದಲ್ಲಿ ಬೆಳ್ತಂಗಡಿ ನಗರದ ಸಂಘ-ಸಂಸ್ಥೆಗಳು, ರಿಕ್ಷಾ ಹಾಗೂ ಇತರ ವಾಹನ ಚಾಲಕ-ಮಾಲಕರ ಸಮಾಲೋಚನಾ ಸಭೆ ಜು.10ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜರುಗಿತು.

ಮುಖ್ಯಾಧಿಕಾರಿ ಸುಧಾಕರ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನಲೆಯಲ್ಲಿ 15 ದಿನಗಳ ಕಾಲ ಸ್ವಯಂ ಪ್ರೇರಿತವಾಗಿ ಲಾಕ್ ಡೌನ್ ಮಾಡುವ ಬಗ್ಗೆ ಶಾಸಕರ ನೇತೃತ್ವದಲ್ಲಿ ನಡೆದ ಸಭೆಯ ಬಗ್ಗೆ ತಿಳಿಸಿದರು. ತಾಲೂಕು ವೈದ್ಯರ ಸಂಘದ ಅಧ್ಯಕ್ಷ ಡಾ| ಮುರಳಿಕೃಷ್ಣ ಇರ್ವತ್ರಾಯ ಅವರು ಕೊರೊನಾ ಹರಡುವ ಬಗ್ಗೆ ಹಾಗೂ ಇದರ ನಿಯಂತ್ರಣಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ವಿವರಿಸಿದರು.


ಕಾರ್ಯಕ್ರಮದಲ್ಲಿ ನ.ಪಂ ಸದಸ್ಯರಾದ ಜಯಾನಂದ ಗೌಡ, ಜಗದೀಶ್ ಡಿ, ಶರತ್‌ಕುಮಾರ್ ಶೆಟ್ಟಿ, ಲೋಕೇಶ್, ಜನಾರ್ದನ ಕುಲಾಲ್, ರಜನಿಕುಡ್ವ, ತುಳಸಿ, ವಕೀಲರ ಸಂಘದ ಅಧ್ಯಕ್ಷ ಎಲೋಸಿಯಸ್ ಲೋಬೋ, ಸೀನಿಯರ್ ಜೇಸಿ ಸ್ಥಾಪಕಾಧ್ಯಕ್ಷ ಪ್ರಮೋದ್ ಆರ್. ನಾಯಕ್, ಅಧ್ಯಕ್ಷ ವಿಶ್ವನಾಥ ಶೆಟ್ಟಿ, ವಿ.ಆರ್.ನಾಯಕ್, ರಾಜೇಶ್ ಕಾಮತ್, ಆಟೋ ಚಾಲಕ-ಮಾಲಕರ ಸಂಘದ ಬಾಬು ಗೌಡ, ನಗರದ ಪ್ರಮುಖರು, ವಾಹನ ಚಾಲಕ-ಮಾಲಕರು, ನಾಗರಿಕರು ಉಪಸ್ಥಿತರಿದ್ದರು.

ಬೆಳ್ತಂಗಡಿ ನಗರದಲ್ಲಿ ಬೆಳಗ್ಗೆ 6ರಿಂದ ಸಂಜೆ 5ರ ತನಕ ವ್ಯವಹಾರ ನಡೆಸಿ 5 ಗಂಟೆಯ ನಂತರ ಮೆಡಿಕಲ್ ಸ್ಟೋರ್ ಹಾಗೂ ಆಸ್ಪತ್ರೆಗಳನ್ನು ಹೊರತು ಪಡಿಸಿ ಎಲ್ಲ ಅಂಗಡಿ, ಮುಂಗಟ್ಟು, ಹೋಟೆಲ್‌ಗಳು ಬಂದ್ ಆಗಬೇಕು, ಪೇಟೆಗೆ ಬರುವ ಎಲ್ಲಾ ನಾಗರಿಕರು ಹಾಗೂ ವ್ಯಾಪಾರಸ್ಥರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಕಾಪಾಡಬೇಕು, ವಾಹನಗಳಲ್ಲಿ ಬೇಕಾಬಿಟ್ಟಿ ಪ್ರಯಾಣಿಕರನ್ನು ಕರೆದೊಯ್ಯುವುದನ್ನು ತಡೆಯಬೇಕು, ಜನರ ಆರ್ಥಿಕ ಚಟುವಟಿಕೆಗಳನ್ನು ಹೆಚ್ಚಿಸುವಲ್ಲಿ ಪೂರಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅಭಿಪ್ರಾಯ ವ್ಯಕ್ತವಾಯಿತು. ಮುಖ್ಯಾಧಿಕಾರಿ ಸುಧಾಕರ್ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.