ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಸುಮಾರು 60 ವರ್ಷ ಪ್ರಾಯದ ವೃದ್ಧ ಜು.12 ರ ಬೆಳಿಗ್ಗೆ ತಮ್ಮ ಸ್ವಗ್ರಹದಲ್ಲಿ ಸಾವನ್ನಪ್ಪಿದ್ದಾರೆ.
ಅನಾರೋಗ್ಯದ ಕಾರಣದಿಂದ ಎರಡು ದಿನದ ಹಿಂದೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಲಾಗಿತ್ತು ,ಅದರ ವರದಿ ಇದೀಗ ಕೈ ಸೇರಿದ್ದು ಸೋಂಕು ದೃಢ ಪಟ್ಟಿದೆ.
ಸ್ಥಳಕ್ಕೆ ತಹಶೀಲ್ದಾರ್, ಆರೋಗ್ಯ ಅಧಿಕಾರಿ ಕಲಾಮಧು, ಕುವೆಟ್ಟು ಗ್ರಾ.ಪಂ ಮಾಜಿ ಅಧ್ಯಕ್ಷ ಅಶೊಕ್ ಕೋಟ್ಯಾನ್, ಸೇರಿದಂತೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.