ಲ್ಯಾಂಪ್ಸ್ ಸೊಸೈಟಿಯಲ್ಲಿ ಎಂಎಲ್‌ಸಿ ಪ್ರತಾಪಸಿಂಹ ನಾಯಕ್ ರಿಗೆ ಸನ್ಮಾನ

Advt_NewsUnder_1
Advt_NewsUnder_1

ಬೆಳ್ತಂಗಡಿ; ತಾಲೂಕು ಪರಿಶಿಷ್ಟ ‌ವರ್ಗದ ದೊಡ್ಡ ಪ್ರಮಾಣದ ವಿವಿದೋದ್ಧೇಶ ಸಹಕಾರಿ ಸಂಘ ಲ್ಯಾಂಪ್ಸ್ (ನಿ)ಬೆಳ್ತಂಗಡಿ ಇದರ ವತಿಯಿಂದ, ಕರ್ನಾಟಕ ವಿಧಾನ ಪರಿಷತ್ ಶಾಸಕರಾಗಿ ಅವಿರೋಧವಾಗಿ ಆರಿಸಿ ಬಂದಿರುವ ಕೆ.ಪ್ರತಾಪ್ ಸಿಂಹನಾಯಕ್ ಇವರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಲಿಂಗಪ್ಪ‌ ನಾಯ್ಕ‌‌ ಉರುವಾಲು ವಹಿಸಿದ್ದರು.

ಸನ್ಮಾನವನ್ನು ಸ್ವೀಕರಿಸಿದ ಪ್ರತಾಪ್ ಸಿಂಹ ನಾಯಕ್ ರವರು, ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು, ಹಾಗೂ ಸಂಘದ ಅಭಿವೃದ್ದಿಗೆ ಸಹಕರಿಸುವುದಾಗಿ ತಿಳಿಸಿದರು‌.

ಈ ಸಂದರ್ಭದಲ್ಲಿ ನ್ಯಾಯವಾದಿಗಳಾದ ಸುಬ್ರಮಣ್ಯ ಕುಮಾರ್ ಅಗರ್ತ, ಜಿಲ್ಲಾ ಪಂಚಾಯತ್ ಸದಸ್ಯ ಕೊರಗಪ್ಪ ನಾಯ್ಕ, ಭೂ ಅಭಿವೃದ್ಧಿ ಬ್ಯಾಂಕ್ ‌ನಿರ್ದೇಶಕ ಕರಿಯ ನಾಯ್ಕ, ಲ್ಯಾಂಪ್ಸ್ ಸೊಸೈಟಿಯ ಕಾರ್ಯದರ್ಶಿ ನೀನಾ ಕುಮಾರ್ ಹಾಗೂ ಸೊಸೈಟಿಯ ನಿರ್ಧೇಶಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತಿ ತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.