ಬೆಳ್ತಂಗಡಿಯ ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಸದಸ್ಯರ ಸಭೆಯು ಟ್ರಸ್ಟನ ಅಧ್ಯಕ್ಷರಾದ ಕೆ ವಸಂತ ಬಂಗೇರ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ಆಗಸ್ಟ್ 4.5.6 ರಂದು ನಡೆಯುವ ಆರಾಧನಾ ಮಹೋತ್ಸವವನ್ನು ಅತ್ಯಂತ ಸರಳವಾಗಿ ಸರಕಾರದ ನಿಯಮಗಳಿಗೆ ಅನುಸಾರವಾಗಿ ಸಾಮಾಜಿಕ ಅಂತರ ಕಾಪಾಡಿಕೊಂಡು ಆಚರಿಸಲು ತೀರ್ಮಾನಿಸಲಾಯಿತು. ಆಗಸ್ಟ್ 4 ರ ಬೆಳಿಗ್ಗೆ ವಿಧಾನಪರಿಷತ್ತಿನ ಸದಸ್ಯರಾದ ಪ್ರತಾಪ ಸಿಂಹ ನಾಯಕ ರವರಿಂದ ಉದ್ಘಾಟನೆ ಗೊಳ್ಳಲಿದ್ದು. ಬೆಳ್ತಂಗಡಿ ರೋಟರಿ ಕ್ಲಬ್ ನ ಅಧ್ಯಕ್ಷರಾದ ಧನಂಜಯ ರಾವ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಭಕ್ತಾದಿಗಳು ಎಲ್ಲಾ ಧಾರ್ಮಿಕ ಕಾರ್ಯಗಳಲ್ಲಿ ದೈಹಿಕ ಅಂತರ ಕಾಪಾಡಿಕೊಂಡು ಶ್ರದ್ಧೆಯಿಂದ ಭಾಗವಹಿಸಬೇಕೆಂದು ಗೌರವಾಧ್ಯಕ್ಷ ಪಿತಾಂಬರ ಹೇರಾಜೆ ಅವರು ತಿಳಿಸಿದರು.
ಉಪಾಧ್ಯಕ್ಷರಾದ ಕೆ ರಮಾನಂದ ಸಾಲ್ಯಾನ್ ಅವರು ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು. ಟ್ರಸ್ಟ್ ನ ಸದಸ್ಯರಾದ ಮಹಾಬಲ ಶೆಟ್ಟಿ, ವಸಂತ ಸುವರ್ಣ, ಪ್ರಧಾನ ಅರ್ಚಕ ರಾಘವೇಂದ್ರ ಭಾಗಿಣ್ಣಾಯ ಮುಂತಾದವರಿದ್ದು ಕೋಶಾಧಿಕಾರಿ ಶೇಖರ ಬಂಗೇರ ಗತ ವರ್ಷದ ಲೆಕ್ಕಪತ್ರವನ್ನು ಸಭೆಗೆ ಮಂಡಿಸಿದರು. ಕಾರ್ಯದರ್ಶಿ ವಿಶ್ವನಾಥ್ ಆರ್ ನಾಯ್ಕ್ ಎಲ್ಲರನ್ನು ಸ್ವಾಗತಿಸಿ ವಂದಿಸಿದರು.