ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಆರೋಗ್ಯ ಇಲಾಖೆ ಮತ್ತು ಪಟ್ಟಣ ಪಂಚಾಯತಿ ಮತ್ತು ತಾಲೂಕು ಆಡಳಿತ ಸಹಯೋಗದಲ್ಲಿ ರಾಪಿಡ್ ಅಂಟಿಜನ್ ಟೆಸ್ಟ್ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಆರೋಗ್ಯ ಇಲಾಖೆ ಮತ್ತು ಪಟ್ಟಣ ಪಂಚಾಯತಿ, ಮತ್ತು ತಾಲೂಕು ಆಡಳಿತದ ಸಹಕಾರದಲ್ಲಿ ಜು.31 ರಂದು  ರಾಪಿಡ್ ಅಂಟಿಜನ್ ಟೆಸ್ಟ್ ಕಾರ್ಯಕ್ರಮದ ಉದ್ಘಾಟನೆ  ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್ ನೆರವೇರಿಸಿದರು. 

ನಾವು ಅತ್ಯಂತ ಎಚ್ಚರದಿಂದ ನಮ್ಮ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಗರಿಷ್ಠ ಜಾಗೃತೆಯನ್ನು ವಹಿಸಬೇಕಾಗಿತ್ತು ಸರಕಾರದಿಂದ ಹಾಗೂ ಸ್ಥಳೀಯ ಆಡಳಿತ ಹಾಗೂ ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದಲ್ಲಿ ಸಮರೋಪಾದಿಯಲ್ಲಿ ಕೊರೋನಾ ದಂತಹ ಸಾಂಕ್ರಾಮಿಕ ರೋಗ ಬರದಂತೆ ತಡೆಗಟ್ಟುವ ವ್ಯವಸ್ಥೆಯನ್ನು ನಿರ್ವಹಿಸಲಾಗುತ್ತಿತ್ತು ಇದರ ಸದುಪಯೋಗವನ್ನು ಸಾರ್ವಜನಿಕರು ಜನಸಾಮಾನ್ಯರು ಆರೋಗ್ಯದ ರಕ್ಷಣೆ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪಸಿಂಹ ನಾಯಕ್ ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಆಡಳಿತಾಧಿಕಾರಿಗಳಾದ ತಹಸಿಲ್ದಾರ್ ಮಹೇಶ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮುಖ್ಯಾಧಿಕಾರಿ ಸುಧಾಕರ್ ಅವರು ಪ್ರಸ್ತಾವಿಕವಾಗಿ ಮಾತನಾಡಿ ಅತಿಥಿಗಳು ಹಾಗೂ ಆರೋಗ್ಯ ಇಲಾಖೆಯವರು ಹಾಗೂ ಸಾರ್ವಜನಿಕರನ್ನು ಸ್ವಾಗತಿಸಿದರು. ಕಾರ್ಯಕ್ರಮದ ಸದುಪಯೋಗವನ್ನು ಬೆಳ್ತಂಗಡಿ ನಗರದ ಜನರು ಪಡೆದುಕೊಳ್ಳಲು ಕರೆ ನೀಡಲಾಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.