ಕಾರ್ಗಿಲ್ ವನದಲ್ಲಿ ವೃಕ್ಷ ರಕ್ಷ ಬಂಧನ; ಪರಿಸರ ಪ್ರೇಮಿಯಿಂದ ವಿನೂತನ ಕಾರ್ಯಕ್ರಮ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ: ದೇಶದಾದ್ಯಂತ ರಕ್ಷಾ ಬಂಧನದ ಸಂಭ್ರಮ. ಅಣ್ಣ, ತಂಗಿ ಬಾಂಧವ್ಯ, ಸ್ನೇಹದ ಪರವಾಗಿ ರಕ್ಷೆ ಕಟ್ಟುವ ಒಂದು ಸಂಪ್ರದಾಯ. ಆದರೆ ಇಂದು ಮಾನವ, ಮಾನವೀಯ ಸ್ನೇಹ, ಪ್ರೀತಿ, ಸಂಬಂಧಗಳೇ ದೂರವಾಗುವ ಈ ಸಮಯದಲ್ಲಿ ಮನುಷ್ಯ ತನ್ನ ಸ್ನೇಹ , ಸಂಬಂಧ, ಪ್ರೀತಿ, ಕಾಳಜಿಯನ್ನು ಪ್ರಕೃತಿಯೊಡನೆ ಇಟ್ಟುಕೊಳ್ಳಬೇಕಾದ ಅನಿವಾರ್ಯತೆ ನಮ್ಮೆದುರು ಇವೆ.
ಇಂತಹ ಸಂದರ್ಭದಲ್ಲಿ ನಾವು ಪ್ರಕೃತಿಯ ಜೊತೆ ಹತ್ತಿರ ಆಗಬೇಕು, ಸ್ನೇಹ ಸಂಪರ್ಕ ಬೆಳೆಸಬೇಕು ಎಂಬ ಸದುದ್ದೇಶವನ್ನು ಇಟ್ಟುಕೊಂಡಿರುವ ಮುಂಡಾಜೆಯ ಕೃಷಿಕ, ಸಾಮಾಜಿಕ ಚಿಂತಕ, ಪರಿಸರ ಪ್ರೇಮಿ ಸಚಿನ್ ಭಿಡೆ ಯವರು ಈ ರಕ್ಷಾ ಬಂಧನದ ಸಂದರ್ಭದಲ್ಲಿ ಮರ, ಗಿಡಗಳಿಗೆ ರಕ್ಷೆಯನ್ನು ಕಟ್ಟುವ ಮೂಲಕ ‘ ವೃಕ್ಷಾ ಬಂಧನ ‘ ಎಂಬ ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಿ ಸಮಾಜಕ್ಕೆ ಮತ್ತು ನಿಸರ್ಗಕ್ಕೆ ಒಳಿತು ಆಗುವ ಹಿತ ದೃಷ್ಟಿಯಿಂದ ಎಲ್ಲರಿಗೂ ಪ್ರೇರಣೆ ಆಗುವಂತೆ ಹೊಸ ಸಂದೇಶವನ್ನು ಸಾರಿದರು.

ಸಚಿನ್ ರವರ ನಾಲ್ಕೂವರೆ ಎಕರೆ ಕೃಷಿ ಜಾಗದಲ್ಲಿರುವ ‘ ಕಾರ್ಗಿಲ್ ವನ’ ದಲ್ಲಿ ಗಿಡಗಳಿಗೆ ರಕ್ಷೆ ಕಟ್ಟುವ ಮೂಲಕ ರಕ್ಷಾ ಬಂಧನಕ್ಕೆ ವಿಶೇಷ ಮೆರುಗು ನೀಡಿದರು. `ವೃಕ್ಷ ರಕ್ಷಾ ಬಂಧನ’ ಕಾರ್ಯಕ್ರಮಕ್ಕೆ ಮುಂಡಾಜೆ ಗ್ರಾಮ ಕೊರೋನ ವಾರಿಯರ್ಸ್ ಆಶಾ ಕಾರ್ಯ ಕರ್ತೆಯರಾದ ಶ್ರೀಮತಿ ಗಾಯತ್ರಿ, ಶ್ರೀಮತಿ ಶಶಿ, ಶ್ರೀಮತಿ ಚಂದ್ರಾವತಿ, ಶ್ರೀಮತಿ ಜಯಂತಿ ಯವರು ತೆಂಗಿನ ಮರದ ಗರಿಯನ್ನು ವಿನ್ಯಾಸ ಗೊಳಿಸಿ ಅದನ್ನೇ ರಕ್ಷಾ ಬಂಧನ ವನ್ನಾಗಿ ಗಿಡಗಳಿಗೆ ಕಟ್ಟಿದರು. ಈ ಸಂದರ್ಭದಲ್ಲಿ ಬಾಲಚಂದ್ರ ನಾಯಕ್ ಮತ್ತಿತರರು ಉಪಸ್ಥಿತರಿದ್ದರು. ಮರ, ಗಿಡಗಳು ಈ ಭೂಮಿಯ ಪ್ರತ್ಯಕ್ಷ ದೇವರು ಮತ್ತು ನಮ್ಮಂತೆ ಜೀವಿಗಳಾಗಿದ್ದು ನಮ್ಮ ಬದುಕಿಗೆ ಚೇತನಾ ಶಕ್ತಿ ನೀಡುವ ಒಡನಾಡಿಗಳು ಅವುಗಳನ್ನು ರಕ್ಷಿಸಬೇಕು ಎಂಬ ಧ್ಯೇಯ ಸಂದೇಶ ದೊಂದಿಗೆ ಈ ಕಾರ್ಯಕ್ರಮ ಸಾರ್ಥಕತೆ ಪಡೆಯಿತು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.