ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ ನಿಷೇಧ; ಕೇಂದ್ರದಿಂದ ಆದೇಶ

Advt_NewsUnder_1
Advt_NewsUnder_1
Advt_NewsUnder_1

ಬೆಳ್ತಂಗಡಿ:ಕೊರೋನಾ ಆತಂಕದ ನಡುವೆಯೂ ಮುಂಬರುವ ಗೌರಿ ಗಣೇಶ ಹಬ್ಬವನ್ನು ನಿರ್ಬಂಧಿತ ನಿಯಮಗಳಿಗೆ ಅನುಸಾರವಾಗಿ ಆಚರಣೆಯನ್ನು ಮಾಡಬೇಕೆಂದು ಕೇಂದ್ರೀಯ ಗೃಹ ಮಂತ್ರಾಲಯ ಆದೇಶ ಹೊರಡಿಸಿದೆ. ದೇಶದಾದ್ಯಂತ ಗೌರೀ-ಗಣೇಶ ಹಬ್ಬವನ್ನು ಪ್ರತಿ ವರ್ಷ ವಿಜೃಂಭಣೆಯಿಂದ ಆಚರಿಸಿಲಾಗುತ್ತಿತ್ತು. ಇದೀಗ ಕೋವಿಡ್-19 ಸಾಂಕ್ರಾಮಿಕದಿಂದಾಗಿ ಎಲ್ಲಾ ಸಾರ್ವಜನಿಕ ಆಚರಣೆಗಳಿಗೆ ಬ್ರೇಕ್ ಬಿದ್ದಿದೆ. ಆಗಸ್ಟ್ 22ರಂದು ಸರಳವಾಗಿ ಗಣಪತಿ ಹಬ್ಬವನ್ನು ಆಚರಿಸುವಂತೆ ಸರಕಾರ ಕರೆ ನೀಡಿದೆ.

 

ಈ ಸಂಬಂಧ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
1.ಈ ಬಾರಿ ಚೌತಿ ಹಬ್ಬವನ್ನು ಸರಳವಾಗಿ ಹಾಗೂ ಭಕ್ತಿಪೂರ್ವಕವಾಗಿ ದೇವಸ್ಥಾನಗಳ ಒಳಗೆ ಮತ್ತು ಮನೆಗಳಲ್ಲಿ ಮಾತ್ರವೇ ಆಚರಿಸುವುದು.

2.ಸಾರ್ವಜನಿಕ ಸ್ಥಳಗಳಲ್ಲಿ (ರಸ್ತೆ, ಗಲ್ಲಿ, ಓಣಿ, ಮೈದಾನ ಇತ್ಯಾದಿ) ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತಿಲ್ಲ.

3.ಗಣಪತಿ ವಿಗ್ರಹವನ್ನು ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ, ಕೊಳ, ಕೆರೆ, ಬಾವಿ ಮತ್ತು ಕಲ್ಯಾಣಿಗಳಲ್ಲಿ ವಿಸರ್ಜಿಸುವಂತಿಲ್ಲ.

4.ಗಣಪತಿ ವಿಗ್ರಹಗಳನ್ನು ಪ್ರತಿಷ್ಠಾಪಿಸಲು ತರುವ ಸಂದರ್ಭದಲ್ಲಿ ಹಾಗೂ ವಿಸರ್ಜನೆಯ ಸಂದರ್ಭದಲ್ಲಿ ಮೆರವಣಿಗೆ ನಡೆಸುವುದಕ್ಕೆ ಕಟ್ಟುನಿಟ್ಟಿನ ನಿರ್ಬಂ‍ಧವಿರಲಿದೆ.

5.ಜನರು ತಮ್ಮ ಮನೆಗಳಲ್ಲಿ ಪ್ರತಿಷ್ಠಾಪಿಸಿದ ಗಣೇಶ ವಿಗ್ರಹಗಳನ್ನು ತಮ್ಮ ಮನೆಯ ಆವರಣದಲ್ಲೇ ವಿಸರ್ಜಿಸಬೇಕು.

6. ಗಣೇಶ ಹಬ್ಬವನ್ನು ಆಚರಿಸುವ ದೇವಸ್ಥಾನಗಳಲ್ಲಿ ಪ್ರತೀ ನಿತ್ಯ ಸ್ಯಾನಿಟೈಸೇಷನ್ ಮಾಡವುದು ಕಡ್ಡಾಯವಾಗಿರುತ್ತದೆ. ಸಾರ್ವಜನಿಕ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳಿಗೆ ಸ್ಯಾನಿಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ನಡೆಸುವುದು ಕಡ್ಡಾಯವಾಗಿರುತ್ತದೆ. ದರ್ಶನ ಸರತಿಯಲ್ಲಿ ಭಕ್ತಾದಿಗಳು ಕನಿಷ್ಟ 6 ಅಡಿ ಅಂತರವನ್ನು ಕಾಯ್ದುಕೊಳ್ಳುವುದು ಹಾಗೂ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ.

7. ಈ ಸಂದರ್ಭದಲ್ಲಿ ಕೋವಿಡ್ 19 ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು. ಅಲ್ಲದೇ, ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿ ಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೇ ಇಲಾಖೆಗಳಿಂದ ಹೊರಡಿಸಲಾಗುವ ಸೂಚನೆ ಹಾಗೂ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕಾಗಿರುತ್ತದೆ.

8.ಗಣೇಶೋತ್ಸವ ಆಚರಣೆಯ ಸಮಯದಲ್ಲಿ ಸಂದರ್ಭಕ್ಕನುಸಾರವಾಗಿ ಸರಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆ/ಪ್ರಾಧಿಕಾರಗಳಿಂದ ಹೊರಡಿಸಲಾಗುವ ಎಲ್ಲಾ ಆದೇಶ/ನಿರ್ದೇಶನ ಹಾಗೂ ಸೂಚನೆಗಳನ್ನು ಪಾಲಿಸುವುದು ಕಡ್ಡಾಯವಾಗಿರುತ್ತದೆ.

9.ಹಬ್ಬ-ಹರಿದಿನಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಗಣೇಶೋತ್ಸವವನ್ನು ಅದೇ ರೀತಿಯಿಂದ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡುವುದು.

10.ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರದ ಆದೇಶ/ ಮಾರ್ಗಸೂಚಿಗಳನ್ನು ಉಲ್ಲಂಘಿಸಿದವರ ವಿರುದ್ದ ವಿಪತ್ತು ನಿರ್ವಹಣಾ ಕಾಯ್ದೆ ೨೦೦೫ ಹಾಗೂ ಭಾರತೀಯ ದಂಡ ಸಹಿತ ಸೆಕ್ಷನ್ ೧೮೮ ರ ಅಡಿಯಲ್ಲಿ ಶಿಸ್ತಿನ ಕಾನೂನು ಕ್ರಮ ಅನ್ವಯವಾಗಬಹುದಾದ ಇತರೆ ಕಾನೂನು ಉಪಬಂಧಗಳ ಮೇರೆಗೆ ಕ್ರಮ ಜರುಗಿಸಲಾಗುವುದು ಈ ಸೂಚನೆಗಳನ್ನು ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ 2005- ಭಾರತೀಯ ದಂಡ ಸಂಹಿತ್ ಸೆಕ್ಷನ್ 188ರ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಎಂದು ಕೇಂದ್ರ ಸರಕಾರ ಪ್ರಕಟಣೆಯಲ್ಲಿ ತಿಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.