ತಾಲೂಕು ಮಟ್ಟದಲ್ಲಿ 74ನೇ ಸ್ವಾತಂತ್ರ್ಯೋತ್ಸವ; ಯುವ ಪೀಳಿಗೆಯಲ್ಲಿ ಆತ್ಮವಿಶ್ವಾಸ ಬೆಳೆಸುವ ಕಾರ್ಯವಾಗಲಿ: ತಹಶೀಲ್ದಾರ್

Advt_NewsUnder_1
Advt_NewsUnder_1
Advt_NewsUnder_1
ಬೆಳ್ತಂಗಡಿ: ಕೊರೊನಾ ಆತಂಕದ ನಡುವೆಯೇ ಬೆಳ್ತಂಗಡಿ ತಾಲೂಕು ಹಬ್ಬಗಳ ಆಚರಣಾ ಸಮಿತಿ ಇದರ ವತಿಯಿಂದ ೭೪ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಆ.೧೫ರಂದು ಬೆಳ್ತಂಗಡಿ ಮಿನಿವಿಧಾನ ಸೌಧದ ಬಳಿ ಸರಳವಾಗಿ ಆಚರಿಸಲಾಯಿತು. ತಹಶೀಲ್ದಾರ್ ಮಹೇಶ್ ಜೆ. ಅವರು ಧ್ವಜಾರೋಹಣವನ್ನು ನೆರವೇರಿಸಿ, ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ನೀಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿದವರ ನೆನಪನ್ನು ಮಾಡುವುದರ ಜೊತೆಗೆ ಮುಂದಿನ ಪೀಳಿಗೆಯ ಸುಂದರ ಬದುಕಿಗಾಗಿ ಅವರಲ್ಲಿ ಆತ್ಮವಿಶ್ವಾಸವನ್ನು ತುಂಬುವ ಕೆಲಸಗಳಾಗಬೇಕು ಎಂದು ಹೇಳಿದರು.
 ಅಧ್ಯಕ್ಷತೆಯನ್ನು ತಾ.ಪಂ ಅಧ್ಯಕ್ಷೆ ದಿವ್ಯಜ್ಯೋತಿ ವಹಿಸಿ ಶುಭ ಕೋರಿದರು. ವೇದಿಕೆಯಲ್ಲಿ ತಾ.ಪಂ ಉಪಾಧ್ಯಕ್ಷೆ ವೇದಾವತಿ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಕುಸುಮಾಧರ್, ಸರ್ಕಲ್ ಇನ್ಸ್‌ಪೆಕ್ಟರ್ ಸಂದೇಶ್, ತಾಲೂಕು ಆರೋಗ್ಯಾಧಿಕಾರಿ ಡಾ| ಕಲಾಮಧು, ಲೋಕೋಪಯೋಗಿ ಇಲಾಖಾ ಸ.ಕಾ. ಅಭಿಯಂತರ ಶಿವಪ್ರಸಾದ ಅಜಿಲ, ಜಿ.ಪಂ ಇಂಜಿನಿಯರಿಂಗ್ ಉಪವಿಭಾಗದ ಸ.ಕಾ. ಅಭಿಯಂತರ ಸೂರ್ಯನಾರಾಯಣ ಭಟ್, ಸಿಡಿಪಿಒ ಪ್ರಿಯಾ ಆಗ್ನೇಸ್, ನ.ಪಂ ಮುಖ್ಯಾಧಿಕಾರಿ ಸುಧಾಕರ್, ನಿವೃತ್ತ ಸೇನಾಧಿಕಾರಿ ಎಂ.ಆರ್.ಜೈನ್, ಎಸ್.ಐ ನಂದ ಕುಮಾರ್,  ತಾ.ಪಂ ಸದಸ್ಯ   ವಿಜಯ ಗೌಡ, ತಾ.ಪಂ ಸಹಾಯಕ ಲೆಕ್ಕ ಅಧೀಕ್ಷಕ ಗಣೇಶ್ ಪೂಜಾರಿ, ಉಪ ತಹಶೀಲ್ದಾರ್‌ಗಳಾದ ಶಂಕರ್, ಮಹಾದೇವ ಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಎಸೆಸೆಲ್ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಸ್ವಾಗತಿಸಿದರು. ಶಿಕ್ಷಣ ಸಂಯೋಜಕ ಸುಭಾಶ್‌ಜಾದವ್ ವಿದ್ಯಾರ್ಥಿಗಳ ವಿವರ ನೀಡಿದರು. ಬಂಗಾಡಿ ಸಿಆರ್‌ಪಿ ರಮೇಶ್ ಕಾರ್ಯಕ್ರಮ ನಿರೂಪಿಸಿ, ಗೃಹರಕ್ಷಕ ದಳದ ತಾಲೂಕು ಘಟಕಾಧಿಕಾರಿ ಜಯಾನಂದ ಎಲ್. ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.