ಹೋಲಿ ರಿಡೀಮರ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಹೋಲಿ ರಿಡೀಮರ್ ಶಾಲೆಯಲ್ಲಿ 74ನೇ ಸ್ವಾತಂತ್ಯೋತ್ಸವವನ್ನು ಆಚರಿಸಲಾಯಿತು. ಶಾಲಾ ನೂತನ ಸಂಚಾಲಕರಾದ ವಂ.ಫಾ.ಜೋಸೆಫ್ ಅಲ್ಫೋನ್ಸ್ ಕಾರ್ಡೋಜಾ ಧ್ವಜಾರೋಹಣವನ್ನು ನೆರವೇರಿಸಿ ಸ್ವಾತಂತ್ರ್ಯ ವೀರರ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ. ನಾವೆಲ್ಲರೂ ಪರೋಪಕಾರ , ಭ್ರಾತೃತ್ವ ಹಾಗೂ ಸಹಬಾಳ್ವೆಯಿಂದ ಬಾಳಬೇಕೆಂದು ನುಡಿದು ಆಶೀರ್ವದಿಸಿದರು. ಶಾಲಾ ಮುಖ್ಯೋಪಾಧ್ಯಾಯರಾದ ವಂ. ಫಾ. ಜೇಸನ್ ಮೋನಿಸ್ ರವರು ಕಾರ್ಯಕ್ರಮಕ್ಕೆ ಮಾರ್ಗದರ್ಶನವನ್ನು ನೀಡಿದರು. ಕಾರ್ಯಕ್ರಮದಲ್ಲಿ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಶ್ರೀ ಅಲೋಶಿಯಸ್ ಲೋಬೋ, ಕಾರ್ಯದರ್ಶಿ ಶ್ರೀಮತಿ ಪೌಲಿನ್ ರೆಗೋ ಹಾಗು ಸದಸ್ಯರು ಉಪಸ್ಥಿತರಿದ್ದರು. ಬೆಳ್ತಂಗಡಿ ಚರ್ಚಿನ ಭಕ್ತಾದಿಗಳು ಅಪಾರ ಸಂಖ್ಯೆಯಲ್ಲಿ ಹಾಜರಿದ್ದು, ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.ಸಹಶಕ್ಷಕಿಯರಾದ ಶ್ರೀಮತಿ ಲೋನ ಲೋಬೊ ಕಾರ್ಯಕ್ರಮ ನಿರೂಪಿಸಿ, ಶ್ರೀಮತಿ ಶಾಂತಿ ಪಿರೇರಾ ಸ್ವಾಗತಿಸಿ, ದೈಹಿಕ ಶಿಕ್ಷಕರಾದ ಶ್ರೀ ಶರತ್ ಪಿಂಟೋ ವಂದಿಸಿದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.