HomePage_Banner_
HomePage_Banner_

ಕುಂಟಾಲಪಲ್ಕೆ: ಸ್ವಾತಂತ್ರ್ಯ ದಿನಾಚರಣೆ

ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಂಟಾಲಪಲ್ಕೆಯಲ್ಲಿ 74 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಕೊರೊನ ಹಿನ್ನಲೆಯಲ್ಲಿ ಇಲಾಖೆಯ ಆದೇಶದಂತೆ ಸರಳವಾಗಿ ಆಚರಿಸಲಾಯಿತು.

ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ ರಾದ ಸುರೇಶ್ ಮಾಚಾರ್ ಧ್ವಜಾರೋಹಣ ನೆರವೇರಿಸಿದರು. ಸಹ ಶಿಕ್ಷಕರಾದ ಗಾಯತ್ರಿ.ಕೆ, ಹರಿಣಾಕ್ಷಿ.ಎನ್.ಹಾಗೂ ಅಂಗನವಾಡಿ ಶಿಕ್ಷಕಿ ಚೇತನಾ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಕಳೆದ ಶೈಕ್ಷಣಿಕ ವರ್ಷದ ಏಳನೇ ತರಗತಿಯಿಂದ ನಿರ್ಗಮಿಸಿದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಸಲಾಯಿತು. ಸಿಹಿತಿಂಡಿ ವಿತರಣೆ ಯೊಂದಿಗೆ ಕಾರ್ಯಕ್ರಮ ಮುಕ್ತಾಯವಾಯಿತು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.