ದ.ಕ ಜಿಲ್ಲಾ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳ ಕ್ಷೇಮಾಭಿವೃದ್ದಿ ಸಂಘದಿಂದ ಜಿಲ್ಲಾಧಿಕಾರಿಗಳ ಭೇಟಿ: ಪಂಚಾಯತ್ ಸಮಸ್ಯೆಗಳ ಮನವಿ

 

ಬೆಳ್ತಂಗಡಿ:  ನೂತನ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರನ್ನು ಆ.17ರಂದು ದ.ಕ ಜಿಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ ದ ವತಿಯಿಂದ ಭೇಟಿ ಮಾಡಿ ಅಭಿನಂದನೆಗಳನ್ನು ಸಲ್ಲಿಸಲಾಯಿತು.

ಜತೆಗೆ ಕಂದಾಯ ಜಮೀನು ಸಂಬಂಧಿಸಿದಂತೆ ಗ್ರಾಮ ಪಂಚಾಯತ್ ಎದುರಿಸುವ ಸಮಸ್ಯೆಗಳನ್ನು ಪರಿಹರಿಸುವಂತೆ ಕೋರಿ ಮನವಿ ಸಲ್ಲಿಸಲಾಯಿತು. ಜಿಲ್ಲಾಧಿಕಾರಿಗಳು  ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸುವ ಭರವಸೆ ನೀಡಿ  ಸಂಘದ ರಚನಾತ್ಮಕ ಕಾರ್ಯದ ಬಗ್ಗೆ ಹರ್ಷ ವ್ಯಕ್ತಪಡಿಸಿದರು. ಜಿಲ್ಲಾ ಅಧ್ಯಕ್ಷ ರಾದ ನಾಗೇಶ್ ಎಂ. ಜಿಲ್ಲಾ ಪದಾಧಿಕಾರಿಗಳಾದ ಯಶವಂತ್, ಶಿವಾನಂದ ಕೆ, ಪೂರ್ಣಿಮಾ , ಸಾಯಿಷ್ ಚೌಟ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.