ವೇಣೂರು ಗಣೇಶೋತ್ಸವ ಆಚರಣಾ ಸಮಿತಿ ಪದಾಧಿಕಾರಿಗಳ ಸಭೆ, ನಿಯಮ ಪಾಲನೆಗೆ ಸೂಚನೆ

ವೇಣೂರು: ಕೊರೊನಾ ಮಹಾಮಾರಿ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹೆಚ್ಚಾಗುತ್ತಿದ್ದು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಸಮಸ್ಯೆ ಉಂಟಾಗಿದೆ. ಸರಕಾರದ ಆದೇಶದಂತೆ ಶ್ರೀ ದೇವರ ಪೂಜೆ ನಡೆಯಲಿದ್ದು ಈ ನಿಟ್ಟಿನಲ್ಲಿ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಗಣೇಶೋತ್ಸವ ಆಚರಣಾ ಸಮಿತಿ ಪದಾಧಿಕಾರಿಗಳನ್ನು ಠಾಣೆಗೆ ಕರೆದು ಸಭೆ ನಡೆಸಿ ಸರಕಾರದ ನೀತಿ ನಿಯಮ ಪಾಲನೆ ಮಾಡುವಂತೆ ಸೂಚನೆ ನೀಡಲಾಗಿದೆ.
ವೇಣೂರು ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಕೆ ಲೋಲಾಕ್ಷರವರ ನೇತೃತ್ವದಲ್ಲಿ ಸಭೆ ನಡೆದಿದೆ. ಠಾಣಾ ವ್ಯಾಪ್ತಿಗೆ ಒಳಪಡುವ 24 ಗ್ರಾಮಗಳಲ್ಲಿ 18 ಕಡೆಗಳಲ್ಲಿ ಗಣೇಶೋತ್ಸವ ನಡೆಯುತ್ತಿದ್ದು ಸರಳವಾಗಿ ದೇವಸ್ಥಾನ, ಭಜನಾ ಮಂದಿರಗಳಲ್ಲಿ ಆಚರಿಸಲು ಅವಕಾಶ ನೀಡಲಾಗಿದೆ.
ಈ ಸಂದರ್ಭದಲ್ಲಿ ಠಾಣಾ ಸಿಬ್ಬಂದಿಗಳು, ಗಣೇಶೋತ್ಸವ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.