HomePage_Banner_
HomePage_Banner_

ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ವತಿಯಿಂದ ಎಸ್ಎಸ್ಎಲ್ ಸಿ ಸಾಧಕರಿಗೆ ಸನ್ಮಾನ

ಬೆಳ್ತಂಗಡಿ: ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ( ಸಿ.ಎಫ್.ಐ) ಬೆಳ್ತಂಗಡಿ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಪುಂಜಾಲಕಟ್ಟೆ ಭವನದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಪಡೆದ ಸುಮಾರು ಹದಿನೆಂಟು ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಪಾಪ್ಯುಲರ್ ಫ್ರಂಟ್ ಬೆಳ್ತಂಗಡಿ ಜಿಲ್ಲಾ ಕಾರ್ಯದರ್ಶಿ ತ್ವಾಹಿರ್ ಇಂಜಿನಿಯರ್ ಸಮಾರೋಪ ಭಾಷಣ ಮಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾಂಪಸ್ ಫ್ರಂಟ್ ಬೆಳ್ತಂಗಡಿ ಜಿಲ್ಲಾಧ್ಯಕ್ಷ ಸಫ್ವಾನ್ ಸುನ್ನತ್ ಕೆರೆ ವಹಿಸಿದರು.ಮುಖ್ಯ ಅತಿಥಿಗಳಿಗಾಗಿ ಕ್ಯಾಂಪಸ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಸಾದಿಕ್ ಜರತ್ತಾರ್, ಜಿಲ್ಲಾ ಸಮಿತಿ ಸದಸ್ಯ ಇಮ್ರಾನ್ ಪಾಂಡವರಕಲ್ಲು, ಝಾಹೀದ್ ಹಾಗೂ ಉಸ್ಮಾನ್ ಉಪಸ್ಥಿತರಿದ್ದರು.ಜಿಲ್ಲಾ ಕಾರ್ಯದರ್ಶಿ ಯಾಸೀನ್ ಬಂಗೇರಕಟ್ಟೆ ಪ್ರಾಸ್ತಾವಿಕ ಮಾತನಾಡಿ,‌ ಸ್ವಾಗತಿಸಿದರು. ಜಿಲ್ಲಾ ಸಮಿತಿ ಸದಸ್ಯ ಶಹೀರ್ ಪಾಂಡವರಕಲ್ಲು ಕಾರ್ಯಕ್ರಮ ನಿರೂಪಿಸಿ ಧನ್ಯವಾದ ಗೈದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.